ಎಬಿಸಿಡಿ 3 ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತು ಜಾಕ್ವಲೀನ್ ಫರ್ನಾಂಡಿಸ್
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮತ್ತು ಜಾಕ್ವಲೀನ್ ಫರ್ನಾಂಡಿಸ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲಿದ್ದಾರೆ. ಈ ಜೋಡಿ 2014ರಲ್ಲಿ ಬಿಡುಗಡೆಯಾಗಿದ್ದ ಕಿಕ್ ಚಿತ್ರದಲ್ಲಿ...
ಬಾಲಿವುಡ್ ಖ್ಯಾತ ನಟ ಸಲ್ಮಾನ್ ಖಾನ್ ಮತ್ತು ಜಾಕ್ವಲೀನ್ ಫರ್ನಾಂಡಿಸ್ ಮತ್ತೆ ಬೆಳ್ಳಿ ಪರದೆ ಮೇಲೆ ಮಿಂಚಲಿದ್ದಾರೆ. ಈ ಜೋಡಿ 2014ರಲ್ಲಿ ಬಿಡುಗಡೆಯಾಗಿದ್ದ ಕಿಕ್ ಚಿತ್ರದಲ್ಲಿ ನಟಿಸಿದ್ದರು.
ಎಬಿಸಿಡಿ 3 ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತು ಜಾಕ್ವಲೀನ್ ಫರ್ನಾಂಡಿಸ್ ಒಟ್ಟಾಗಿ ಅಭಿನಯಿಸಲಿದ್ದಾರೆ ಎಂದು ತಿಳಿದಬಂದಿದೆ. ಚಿತ್ರವನ್ನು ರೆಮೋ ಡಿಸೋಜಾ ನಿರ್ದೇಶಿಸಲಿದ್ದು ಇದೊಂದು ನೃತ್ಯ ಕುರಿತಾದ ಚಿತ್ರವಾಗಲಿದೆ.
ಈ ಹಿಂದೆ ಎಬಿಸಿಡಿ ಮತ್ತು ಎಬಿಸಿಡಿ 2 ಚಿತ್ರಗಳು ಬಿಡುಗಡೆಯಾಗಿ ಯಶಸ್ಸು ಕಂಡಿದ್ದು ಇದೀಗ ಇದೇ ಸರಣಿಯ ಮೂರನೇ ಚಿತ್ರ ತೆರೆಗೆ ಬರಲಿದೆ. ಸದ್ಯ ಸಲ್ಮಾನ್ ಖಾನ್ ಟೈಗರ್ ಜಿಂದಾ ಹೈ ಚಿತ್ರದಲ್ಲಿ ನಟಿಸುತ್ತಿದ್ದು ಆ ಚಿತ್ರದ ಬಳಿಕ ಎಬಿಸಿಡಿ 3 ಚಿತ್ರದಲ್ಲಿ ನಟಿಸಲಿದ್ದಾರೆ.
ಚಿತ್ರದಲ್ಲಿ ಸಲ್ಮಾನ್ ಖಾನ್ ತನ್ನ ಮಗಳನ್ನು ನೃತ್ಯ ಸ್ಪರ್ಧೆಗೆ ಅಣಿ ಮಾಡುವ ತಂದೆಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಜಾಕ್ವಲೀನ್ ಫರ್ನಾಂಡಿಸ್ ನೃತ್ಯ ಶಿಕ್ಷಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.