ಮುಂಬೈ: 1993ರ ಸರಣಿ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಆರೋಪದಡಿ ಐದು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರನ್ನು ಅವಧಿ ಪೂರ್ವ ಬಿಡುಗಡೆ ಮಾಡಿರುವುದಕ್ಕೆ ಸಮರ್ಥನೆ ನೀಡುವಂತೆ ಮುಂಬೈ ಹೈಕೋರ್ಟ್ ಮಹಾರಾಷ್ಟ್ರ ಸರ್ಕಾರವನ್ನು ಆಗ್ರಹಿಸಿದೆ.
ಯೆರವಾಡ ಸೆಂಟ್ರಲ್ ಜೈಲಿನಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಸಂಜಯ್ ದತ್ ಅವರನ್ನು ಉತ್ತಮ ಗುಣ ನಡತೆಯ ಆಧಾರದ ಮೇಲೆ ಜೈಲು ಶಿಕ್ಷೆ ಅವಧಿ ಅಧಿಕೃತವಾಗಿ ಮುಗಿಯುವುದಕ್ಕೆ 8 ತಿಂಗಳು ಬಾಕಿ ಇರುವಂತೆ ಅವರನ್ನು 2016ರ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಾಗಿತ್ತು. ಸಂಜಯ್ ದತ್ ಅವರನ್ನು ಅವಧಿ ಪೂರ್ವ ಬಿಡುಗಡೆಗೆ ಮಹಾರಾಷ್ಟ್ರ ಗೃಹ ಸಚಿವಾಲವು ಸಮ್ಮತಿ ಸೂಚಿಸಿತ್ತು.
ದತ್ ಅವಧಿಪೂರ್ವ ಬಿಡುಗಡೆಯನ್ನು ಪ್ರಶ್ನಿಸಿ ಪುಣೆ ಮೂಲದ ಪ್ರದೀಪ್ ಬಾಲೇಕರ್ ಅವರು ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ಆರ್ ಎಂ ಸಾವಂತ್ ಮತ್ತು ಸಾಧನಾ ಜಾದವ್ ಅವರು ದತ್ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics