ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ಸುಲ್ತಾನ್ ಚಿತ್ರ ಶಾಂಘೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದೆ.
ಚಲನಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲು ತಮ್ಮ ಚಿತ್ರ ಆಯ್ಕೆಯಾಗಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಲ್ತಾನ್ ಚಿತ್ರ ನಿರ್ದೇಶ ಅಲಿ ಅಬ್ಬಾಸ್ ಜಾಫರ್ ಇದು ಅತ್ಯಂತ ಹೆಮ್ಮೆಯ ವಿಷಯ ಎಂದು ಹೇಳಿದ್ದಾರೆ. ಜೂ.17-26 ರ ವರೆಗೆ ಚಲನಚಿತ್ರೋತ್ಸವ ನಡೆಯಲಿದೆ.
ಸುಲ್ತಾನ್ ಸಿನಿಮಾ ದೇಶಿ ಕ್ರೀಡೆಯ ಕಥಾ ಹಂದರ ಹೊಂದಿರುವ ಸಿನಿಮಾ ಆಗಿದೆ. ಸಿನಿಮಾದಲ್ಲಿರುವ ಸಾಹಸಮಯ ದೇಶಿ ಕ್ರೀಡೆಯನ್ನು ಪ್ರತಿನಿಧಿಸುತ್ತಿದ್ದು, ಭಾರತದಾದ್ಯಂತ ಮೆಚ್ಚುಗೆ ಗಳಿಸಿದೆ. ಚೀನಾ ಸಹ ತನ್ನ ಪರಂಪಾರಾಗತ ಮಾರ್ಷಲ್ ಆರ್ಟ್ಸ್ ಹಾಗೂ ಸಾಂಪ್ರದಾಯಿಕ ಸಾಹಸಮಯ ಚಿತ್ರಗಳನ್ನು ಹೊಂದಿದ್ದು, ಚೀನಾದಲ್ಲಿ ಸುಲ್ತಾನ್ ಚಿತ್ರ ಪ್ರದರ್ಶನಗೊಳ್ಳುತ್ತಿರುವುದು ಸಂತಸದ ವಿಷಯವಾಗಿದೆ ಎಂದು ಜಾಫರ್ ಹೇಳಿದ್ದಾರೆ.