ಬಾಹುಬಲಿ 2 ದಾಖಲೆ ಮುರಿಯಲು ಸಜ್ಜಾದ "ಟ್ಯೂಬ್ ಲೈಟ್"!
ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಟ್ಯೂಬ್ಲೈಟ್' ಚಿತ್ರ ದಾಖಲೆ ನಿರ್ಮಾಣಕ್ಕೆ ಸಜ್ಜಾಗುತ್ತಿದ್ದು, ಬಾಹುಬಲಿ 2 ನಿರ್ಮಿಸಿದ್ದ ದಾಖಲೆಯೊಂದನ್ನು ಮುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್ ಅಭಿನಯದ ‘ಟ್ಯೂಬ್ಲೈಟ್' ಚಿತ್ರ ದಾಖಲೆ ನಿರ್ಮಾಣಕ್ಕೆ ಸಜ್ಜಾಗುತ್ತಿದ್ದು, ಬಾಹುಬಲಿ 2 ನಿರ್ಮಿಸಿದ್ದ ದಾಖಲೆಯೊಂದನ್ನು ಮುರಿಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಮೂಲಗಳ ಪ್ರಕಾರ ಇದೇ ಜೂನ್ 25ರಂದು ತೆರೆಕಾಣುತ್ತಿರುವ ಟ್ಯೂಬ್ ಲೈಟ್ ಚಿತ್ರವನ್ನು ವಿಶ್ವಾದ್ಯಂತ ಬರೊಬ್ಬರಿ 10 ಸಾವಿರ ಸ್ಕ್ರೀನ್ ಗಳಲ್ಲಿ ತೆರೆಗೆ ತರಲು ಚಿತ್ರತಂಡ ಸಿದ್ಧತೆ ನಡೆಸಿದೆ. ಬಾಹುಬಲಿ 2 ಚಿತ್ರ 9 ಸಾವಿರ ಸ್ಕ್ರೀನ್ ಗಳಲ್ಲಿ ಏಕಕಾಲಕ್ಕೆ ತೆರೆಕಾಣುವ ಮೂಲಕ ದಾಖಲೆ ನಿರ್ಮಿಸಿತ್ತು. ಇದೀಗ ಟ್ಯೂಬ್ ಲೈಟ್ ಚಿತ್ರ ಈ ದಾಖಲೆಯನ್ನು ಮುರಿಯುವ ಸಾಧ್ಯತೆ ಇದೆ.
ಟ್ಯೂಬ್ ಲೈಟ್ ಚಿತ್ರವನ್ನು ಖ್ಯಾತ ನಿರ್ದೇಶಕ ಕಬೀರ್ ಖಾನ್ ನಿರ್ದೇಶನ ಮಾಡಿದ್ದು, 1962ರ ಭಾರತ-ಚೀನಾ ಯುದ್ಧದ ಕುರಿತಾದ ಕಥಾಹಂದರವನ್ನು ಚಿತ್ರಹೊಂದಿದೆ. ಲಕ್ಷ್ಮಣ್ ಸಿಂಗ್ ಬಿಷ್ತ್ ಮತ್ತು ಭಾರತ್ ಸಿಂಗ್ ಬಿಷ್ತ್ ಪಾತ್ರದಲ್ಲಿ ಸಲ್ಮಾನ್ ಮತ್ತು ಅವರ ಸೋದರ ಸೊಹೇಲ್ ಖಾನ್ ಅಭಿನಯಿಸಿದ್ದಾರೆ. ಚೀನಾದ ನಟಿ ಝು ಝು ಭಾರತದ ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಅಭಿನಯಿಸಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.