ಸಂಗ್ರಹ ಚಿತ್ರ 
ಬಾಲಿವುಡ್

ವಿವಾದಾತ್ಮಕ ಟ್ವೀಟ್; ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಟ್ವಿಟರ್ ಖಾತೆ ಅಮಾನತು!

ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಟ್ವಿಟರ್ ಖಾತೆಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ಮಹಿಳೆಯರಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಟ್ವೀಟ್ ಮಾಡಿದ ಹಿನ್ನಲೆಯಲ್ಲಿ ಬಾಲಿವುಡ್ ಗಾಯಕ ಅಭಿಜಿತ್ ಭಟ್ಟಾಚಾರ್ಯ ಅವರ ಟ್ವಿಟರ್ ಖಾತೆಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಬಾಲಿವುಡ್ ಖ್ಯಾತ ಗಾಯಕರಲ್ಲಿ ಒಬ್ಬರಾಗಿರುವ  ಅಭಿಜಿತ್ ಭಟ್ಟಾಚಾರ್ಯ ಅವರು ಇತ್ತೀಚೆಗೆ ಜೆಎನ್ ಯು ವಿದ್ಯಾರ್ಥಿ ಸಂಘಟನೆ ನಾಯಕಿ ಶೆಹ್ಲಾ ರಷೀದ್ ಸೇರಿದಂತೆ ಮಹಿಳೆಯರ ವಿರುದ್ದ ಅವಹೇಳನಕಾರಿ ಟ್ವೀಟ್ ಮಾಡಿದ್ದರು.  ಈ ಟ್ವೀಟ್ ಗಳ ವಿರುದ್ಧ ಶೆಹ್ಲಾ ರಷೀದ್ ಅವರು ದೂರು ಕೂಡ ನೀಡಿದ್ದರು. "ಆಕೆ 2 ಗಂಟೆಗೆ ಹಣ ಪಡೆದು ಗ್ರಾಹಕನನ್ನು ಸಂತೃಪ್ತಿ ಗೊಳಿಸಿಲ್ಲ ಎಂಬ ಊಹಾಪೋಹಗಳಿವೆ ಎಂದು ಅಭಿಜಿತ್ ಟ್ವೀಟ್ ಮಾಡಿದ್ದರು. ಈ ಬಗ್ಗೆ ಶೆಹ್ಲಾ ರಷೀದ್  ಮಾನಹಾನಿ ದೂರು ದಾಖಲಿಸಿದ್ದರು. ಅಲ್ಲದೆ ಶೆಹ್ಲಾ ಅವರಿಗೆ ಬೆಂಬಲಿಸಿ ನೂರಾರು ಟ್ವೀಟ್ ಗಳು ಹರಿದು ಬಂದಿತ್ತು.

ಇದಾದ ಬೆನ್ನಲ್ಲೇ ಅಭಿಜಿತ್ ತಮ್ಮ ವಿವಾದಾತ್ಮಕ ಟ್ವೀಟ್ ಗಳನ್ನು ಡಿಲೀಟ್ ಮಾಡಿದ್ದರು. ಇದನ್ನು ಉಲ್ಲೇಖಿಸಿ ಶೆಹ್ಲಾ ಟ್ವೀಟ್ ಮಾಡಿದ್ದರು. ಅಲ್ಲದೆ ತಮ್ಮನ್ನು ಬೆಂಬಲಿಸಿದವರಿಗೆ ಧನ್ಯವಾದಗಳನ್ನು ಕೂಡ ತಿಳಿಸಿದ್ದರು. ಇದೀಗ  ಅಭಿಜಿತ್ ಅವರ ಟ್ವಿಟರ್ ಖಾತೆಯನ್ನು ಅಮಾನತು ಮಾಡಲಾಗಿದ್ದು, ತಮ್ಮ ಖಾತೆ ಅಮಾನತಿಗೆ ಲೇಖಕಿ ಅರುಂಧತಿ ರಾಯ್ ಮತ್ತು ಜೆಎನ್ ಯು ವಿದ್ಯಾರ್ಥಿ ಸಂಘಟನೆಗಳ ಕೈವಾಡವಿದೆ ಎಂದು ಗಾಯಕ ಅಭಿಜಿತ್  ಆರೋಪಿಸಿದ್ದಾರೆ. ಇದೀಗ ಅಭಿಜಿತ್ ಪರವಾಗಿಯೂ ಒಂದಷ್ಟು ಟ್ವೀಟಿಗರು ಟ್ವೀಟ್ ಮಾಡುತ್ತಿದ್ದು, ಸ್ಟಾಂಡ್ ವಿತ್ ಅಭಿಜಿತ್ (#IStandWithAbhijeet)ಎಂಬ ಹ್ಯಾಶ್ ಟ್ಯಾಗ್ ನಡಿಯಲ್ಲಿ ಟ್ವೀಟ್ ಮಾಡುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT