ರಣವೀರ್ ಸಿಂಗ್ 
ಬಾಲಿವುಡ್

ನಾನು ಶೇ.200ರಷ್ಟು 'ಪದ್ಮಾವತಿ' ಪರ ಇದ್ದೇನೆ: ರಣವೀರ್ ಸಿಂಗ್

ಪದ್ಮಾವತಿ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇದೇ....

ಮುಂಬೈ: ಪದ್ಮಾವತಿ ಚಿತ್ರದಲ್ಲಿ ಅಲ್ಲಾವುದ್ದೀನ್ ಖಿಲ್ಜಿ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದು, ತಾವು ಶೇ.200ರಷ್ಟು 'ಪದ್ಮಾವತಿ'ಯೊಂದಿಗೆ ಮತ್ತು ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಭನ್ಸಾಲಿ ಅವರೊಂದಿಗೆ ಇರುವುದಾಗಿ ಮಂಗಳವಾರ ಹೇಳಿದ್ದಾರೆ.
ಇದೊಂದು ಸೂಕ್ಷ್ಮ ವಿಚಾರವಾಗಿದ್ದು, ಚಿತ್ರದ ನಿರ್ಮಾಪಕರು ಅಧಿಕೃತವಾಗಿ ತಮ್ಮ ನಿಲುವು ಸ್ಪಷ್ಟಪಡಿಸುವವರೆಗೆ ಯಾವುದೇ ಹೇಳಿಕೆ ನೀಡದಂತೆ ನನಗೆ ಸೂಚಿಸಲಾಗಿತ್ತು ಎಂದು ರಣವೀರ್ ಸಿಂಗ್ ಅವರು ಎಎನ್ಐ ಸ್ಪಷ್ಟಪಡಿಸಿದ್ದಾರೆ.
ಸಾರ್ವಜನಿಕರ ಭಾವನೆಗೆ ಧಕ್ಕೆ ತಂದರೆ ಮೂಗು ಕತ್ತರಿಸುವುದಾಗಿ ಶ್ರೀ ರಜಪೂತ್ ಕರ್ಣಿ ಸೇನಾ ಪದ್ಮಾವತಿ ಚಿತ್ರದ ನಟಿ ದೀಪಿಕಾ ಪಡುಕೋಣೆಗೆ ಬೆದರಿಕೆ ಹಾಕಿದ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ನಟಿಗೆ ಬಿಗಿ ಭದ್ರತೆ ಒದಗಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
‘ಶೂರ್ಪನಖಿಗೆ ಲಕ್ಷ್ಮಣ ಮಾಡಿದ್ದನ್ನೇ ನಾವು ದೀಪಿಕಾಗೂ ಮಾಡಲು ಹೇಸುವುದಿಲ್ಲ’ ಎಂದು ಕರ್ಣಿ ಸೇನಾ ನಾಯಕ ಮಹಿಪಾಲ್ ಸಿಂಗ್ ಮಕ್ರಾನ ಅವರು ಎಚ್ಚರಿಕೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕಾ ಭೀಕರ ಪ್ರತಿಕಾರದ ದಾಳಿ, ಮಧ್ಯಪ್ರಾಚ್ಯದಲ್ಲಿ ಮತ್ತೆ ಭುಗಿಲೆದ್ದ ಸಂಘರ್ಷ..!

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!