ಅದಿತಿ ರಾವ್ ಹೈದರಿ 
ಬಾಲಿವುಡ್

ನನಗೆ ಭಾರತವನ್ನು ಅರ್ಥಮಾಡಿಕೊಳ್ಳಲಾಗಿಲ್ಲ: ಅದಿತಿ ರಾವ್

ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಚಿತ್ರಕ್ಕೆ ದೇಶಾದ್ಯಂತ ವಿರೋಧ....

ಮುಂಬೈ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ಹಾಗೂ ದೀಪಿಕಾ ಪಡುಕೋಣೆ ಅಭಿನಯದ 'ಪದ್ಮಾವತಿ' ಚಿತ್ರಕ್ಕೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಚಿತ್ರದ ನಟಿ ಅದಿತಿ ರಾವ್ ಹೈದರಿ, ಜನ ಚಿತ್ರದ ಚಿತ್ರದ ವಿರುದ್ಧ ವ್ಯಕ್ತಪಡಿಸುವ ಆಕ್ರೋಶವನ್ನು ಮಹಿಳೆಯರ ಮೇಲಿನ ಹಿಂಸಾಚಾರ ವಿರುದ್ಧ ಏಕೆ ವ್ಯಕ್ತಪಡಿಸುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.
ಭನ್ಸಾಲಿ ಅವರ ವಿವಾದಾತ್ಮಕ ಐತಿಹಾಸಿಕ ಚಿತ್ರದಲ್ಲಿ ನಟಿಸಿರುವ ಅದಿತಿ, ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಆದರೆ ಜನರ ಮನಸ್ಥಿತಿಯನ್ನು ಅರ್ಥ ಮಾಡಿಕೊಳ್ಳುವಲ್ಲಿ ವಿಫಲವಾಗಿದ್ದೇನೆ ಎಂದಿದ್ದಾರೆ.
ಮಹಿಳೆಯ ಮೇಲೆ ಅತ್ಯಾಚಾರ ನಡೆದಾಗ, ಹಿಂಸೆ ನಡೆದಾಗ, ಹಲ್ಲೆ ನಡೆಸಿದಾಗ, ಮಾರಾಟ ಮಾಡಿದಾಗ ಹತ್ಯೆ ಮಾಡಿದಾಗ ಜನ ಏಕೆ ಈ ರೀತಿ ಆಕ್ರೋಶ ವ್ಯಕ್ತಪಡಿಸುವುದಿಲ್ಲ ಮತ್ತು ಬದಲಾವಣೆಗಾಗಿ ಏಕೆ ಒತ್ತಾಯಿಸುವುದಲ್ಲಿ? ನನಗೆ ಇದು ಅರ್ಥವಾಗುತ್ತಿಲ್ಲ. ನಾನು ನನ್ನ ದೇಶವನ್ನು ಪ್ರೀತಿಸುತ್ತೇನೆ. ಆದರೆ ನನಗೆ ಭಾರತವನ್ನು ಅರ್ಥಮಾಡಿಕೊಳ್ಳಲಾಗಿಲ್ಲ ಎಂದು ಅದಿತಿ ಟ್ವೀಟ್ ಮಾಡಿದ್ದಾರೆ.
'ದೇಶ ಇದನ್ನು ಅರ್ಥ ಮಾಡಿಕೊಳ್ಳುತ್ತೆ ಎಂದು ನಾನು ನಂಬಿದ್ದೇನೆ. ದಯವಿಟ್ಟು ನನ್ನ ದೇಶವನ್ನು ಮರಳಿ ನೀಡುತ್ತೀರಾ?' ಎಂದು ಬಾಲಿವುಡ್ ನಟಿ 'ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT