ಪಿಟಿ ಉಷಾ-ಪ್ರಿಯಾಂಕ ಚೋಪ್ರಾ 
ಬಾಲಿವುಡ್

ಮೇರಿ ಕೋಮ್ ನಂತರ ಪಿಟಿ ಉಷಾ ಬಯೋಪಿಕ್‍ನಲ್ಲಿ ಪ್ರಿಯಾಂಕಾ ಚೋಪ್ರಾ

ಭಾರತದ ಖ್ಯಾತ ಬಾಕ್ಸರ್ ಮೇರಿ ಕೋಮ್ ಜೀವನಾಧಾರಿತ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಖ್ಯಾತ ಓಟಗಾರ್ತಿ ಪಿಟಿ...

ಭಾರತದ ಖ್ಯಾತ ಬಾಕ್ಸರ್ ಮೇರಿ ಕೋಮ್ ಜೀವನಾಧಾರಿತ ಚಿತ್ರದಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಇದೀಗ ಖ್ಯಾತ ಓಟಗಾರ್ತಿ ಪಿಟಿ ಉಷಾ ಜೀವನಾಧಾರಿತ ಚಿತ್ರದಲ್ಲಿ ನಟಿಸುತ್ತಿದ್ದಾರೆ. 
ಜಾಹಿರಾತು ನಿರ್ದೇಶಕಿ ರೇವತಿ ವರ್ಮಾ ಅವರು ಪಿಟಿ ಉಷಾ ಬಯೋಪಿಕ್ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶನರಾಗುತ್ತಿದ್ದು ಚಿತ್ರಕ್ಕೆ ಪ್ರಿಯಾಂಕಾ ಚೋಪ್ರಾರನ್ನು ಆಯ್ಕೆ ಮಾಡಿದ್ದಾರೆ. ಇನ್ನು ಚಿತ್ರಕ್ಕೆ ಭಾರತದ ಖ್ಯಾತ ಸಂಗೀತ ನಿರ್ದೇಶಕ ಎಆರ್ ರೆಹಮಾನ್ ಸಂಗೀತ ಸಂಯೋಜಿಸುವುದು ಖಚಿತವಾಗಿದೆ. 
ಪಿಟಿ ಉಷಾ ಬಯೋಪಿಕ್ ಚಿತ್ರದಲ್ಲಿ ಮೂರು ಹಂತದ ಪಾತ್ರ ನಿರ್ವಹಣೆ ಮಾಡಬೇಕಿದೆ. ಮೊದಲಿಗೆ ಬಾಲಕಿ ನಂತರ ಓಟಗಾರ್ತಿಯಾಗುವುದು, ನಂತರ ಅಥ್ಲೀಟ್ ಆ ನಂತರ ತಾಯಿ ಮತ್ತು ಕೋಚ್ ಈ ಮೂರು ಹಂತದಲ್ಲಿ ತೆರೆಯ ಮೇಲೆ ಚಿತ್ರ ರೂಪಗೊಳ್ಳಲಿದೆ. 
ಆರು ತಿಂಗಳ ನಂತರ ಚಿತ್ರ ಸೆಟ್ಟೇರಲಿದ್ದು 100 ಕೋಟಿ ಬಂಡವಾಳದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಹಿಂದಿ, ಇಂಗ್ಲೀಷ್, ಮಲಯಾಳಂ, ಚೀನೀ ಹಾಗೂ ರಷ್ಯಾ ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?