ಸಂಜಯ್ ದತ್ 
ಬಾಲಿವುಡ್

ರಯಾನ್ ಶಾಲೆ ಬಾಲಕ ಹತ್ಯೆ; ತನ್ನ ಮಕ್ಕಳ ಸುರಕ್ಷಿತೆ ಬಗ್ಗೆ ಆತಂಕವಾಗುತ್ತಿದೆ: ಸಂಜಯ್ ದತ್

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿರುವ ರಯಾನ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿ ಹತ್ಯೆ ಪ್ರಕರಣದಿಂದಾಗಿ ನನ್ನ ಮಕ್ಕಳ ಸುರಕ್ಷತೆ ಬಗ್ಗೆ ಭಯವಾಗುತ್ತಿದೆ...

ನವದೆಹಲಿ: ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿರುವ ರಯಾನ್ ಇಂಟರ್ ನ್ಯಾಷನಲ್ ಶಾಲೆ ವಿದ್ಯಾರ್ಥಿ ಹತ್ಯೆ ಪ್ರಕರಣದಿಂದಾಗಿ ನನ್ನ ಮಕ್ಕಳ ಸುರಕ್ಷತೆ ಬಗ್ಗೆ ಭಯವಾಗುತ್ತಿದೆ ಎಂದು ಬಾಲಿವುಡ್ ನಟ ಸಂಜಯ್ ದತ್ ಆತಂಕ ವ್ಯಕ್ತಪಡಿಸಿದ್ದಾರೆ. 
ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ನಡೆಯುತ್ತಿರುವ ಸರಿಯಲ್ಲ. ರಯಾನ್ ಶಾಲೆಯ ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್ ನ ಬರ್ಜರ ಹತ್ಯೆ ನಂತರ ನನ್ನ ಮಕ್ಕಳ ಸುರಕ್ಷತೆ ಬಗ್ಗೆ ಆತಂಕವಾಗುತ್ತಿದೆ ಎಂದರು. 
ಇಂತಹ ಘಟನೆಗಳನ್ನು ಎಲ್ಲರೂ ಒಗ್ಗೂಡಿ ಖಂಡಿಸಬೇಕು ಆಗ ಮಾತ್ರ ಕೆಲ ಬದಲಾವಣೆಗಳನ್ನು ತರಲು ಸಾಧ್ಯ. ಇಂತಹ ಕೃತ್ಯ ಎಸಗಿದವರಿಗೆ ಕಠಿಣ ಶಿಕ್ಷೆಯಾಗಬೇಕು. ತಮ್ಮ ಮಗನನ್ನು ಕಳೆದುಕೊಂಡ ಪೋಷಕರಿಗೆ ನ್ಯಾಯ ಸಿಗಬೇಕು ಎಂದರು. 
ಸೆಪ್ಟೆಂಬರ್ 8 ರಂದು ರಿಯಾನ್ ಶಾಲೆಯ 2ನೇ ತರಗತಿ ವಿದ್ಯಾರ್ಥಿ ಪ್ರದ್ಯುಮನ್ ಠಾಕೂರ್ ಎಂಬ ಬಾಲಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರದ್ಯುಮನ್ ಕತ್ತು ಸೀಳಿದ್ದ ದುಷ್ಕರ್ಮಿಗಳು ಶಾಲೆಯ ಶೌಚಾಲಯದಲ್ಲಿ ದೇಹವನ್ನು ಬಿಸಾಡಿದ್ದರು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಬಾಲಕನನ್ನು ನೋಡಿದ್ದ ವಿದ್ಯಾರ್ಥಿಗಳು ಶಿಕ್ಷಕರಿಗೆ ಮಾಹಿತಿ ನೀಡಿದ್ದರು. 
ಶಾಲಾ ಆಡಳಿತ ಮಂಡಳಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದರು, ಆದರೆ, ವೈದ್ಯರು ಬಾಲಕ ಸಾವನ್ನಪ್ಪಿರುವುದಾಗಿ ಘೋಷಿಸಿದ್ದರು. ಪ್ರಕರಣಕ್ಕೆ ಬಾಲಕನ ಪೋಷಕರು ತೀವ್ರವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೆ ಶಾಲಾ ಆಡಳಿತ ಮಂಡಳಿಯ ವಿರುದ್ಧ ತೀವ್ರವಾಗಿ ಪ್ರತಿಭಟಿಸಿದ್ದರು. ನಿನ್ನೆಯಷ್ಟೇ ಪ್ರಕರಣವನ್ನು ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT