ಡಯಾನ ಹೇಡನ್ 
ಬಾಲಿವುಡ್

ನನ್ನ ಕಂದು ಬಣ್ಣದ ಬಗ್ಗೆ ನನಗೆ ಹೆಮ್ಮೆ ಇದೆ: ತ್ರಿಪುರ ಸಿಎಂಗೆ ಡಯಾನ ಟಾಂಗ್

ನನ್ನ ವಿನೂತನ ಕಂದು ಬಣ್ಣದ ಬಗ್ಗೆ ನನಗೆ ಹೆಮ್ಮೆ ಎಂದು ಹೇಳುವ ಮೂಲಕ ಮಾಜಿ ವಿಶ್ವ ಸುಂದರಿ ಡಯಾನ ಹೇಡನ್...

ಮುಂಬೈ: ನನ್ನ ವಿನೂತನ ಕಂದು ಬಣ್ಣದ ಬಗ್ಗೆ ನನಗೆ ಹೆಮ್ಮೆ ಎಂದು ಹೇಳುವ ಮೂಲಕ ಮಾಜಿ ವಿಶ್ವ ಸುಂದರಿ ಡಯಾನ್ ಹೇಡನ್ ಅವರು ತಮ್ಮ ಸೌಂದರ್ಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ತ್ರಿಪುರಾ ಮುಖ್ಯಮಂತ್ರಿ ಬಿಪ್ಲವ್ ದೇಬ್ ಅವರಿಗೆ ಶುಕ್ರವಾರ ತಿರುಗೇಟು ನೀಡಿದ್ದಾರೆ.
ನಿನ್ನೆ ಅಗರತಾಲದಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ದೇಬ್, ಡಯಾನಾ ಹೇಡನ್ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಗೆದ್ದಿದ್ದಾರೆ. ಈ ವಿಷಯವನ್ನು ಕೇಳಿದ ಪ್ರತಿಯೊಬ್ಬರೂ ನಗುತ್ತಾರೆ. ನೀವೇ ಹೇಳಿ, ಡಯಾನಾ ಗೆಲ್ಲಲು ಸಾಧ್ಯವೇ? ಎಂದು ಪ್ರಶ್ನಿಸಿದ್ದರು. ಭಾರತೀಯ ಸೌಂದರ್ಯ ಎಂದರೆ ದೇವತೆಗಳಾದ ಲಕ್ಷ್ಮಿ, ಸರಸ್ವತಿಯರದು. ಡಯಾನ ಹೇಡನ್ ಈ ದರ್ಜೆಯ ಸೌಂದರ್ಯಕ್ಕೆ ಸೂಕ್ತವಲ್ಲ ಎಂದು ಅವರು ವಿವಾದದ ಕಿಡಿ ಹಚ್ಚಿದ್ದರು.
ಐಶ್ವರ್ಯ ರೈ ಅವರ ಗೆಲುವು ನ್ಯಾಯಸಮ್ಮತ. ಅವರದ್ದು ಭಾರತೀಯ ಸೌಂದರ್ಯ ಎಂದಿದ್ದ ದೇಬ್,  ಡಯಾನ ಹೇಡನ್ ಅವರ ಆಯ್ಕೆಯ ಹಿಂದೆ ವ್ಯಾವಹಾರಿಕ ಕಾರಣಗಳಿವೆ ಎಂದು ಕೂಡ ಆರೋಪಿಸಿದ್ದರು.
ಕಂದು ಬಣ್ಣದ ಪೂರ್ವಾಗ್ರಹದ ವಿರುದ್ಧ ನಾನು ಬಾಲ್ಯದಿಂದ ಹೋರಾಡುತ್ತಿದ್ದೇನೆ ನನ್ನ ಹೋರಾಟದಲ್ಲಿ ನಾನು ಯಶಸ್ಸು ಸಾಧಿಸಿದ್ದೇನೆ ಎಂದು ಎಂದು ಡಯಾನ ಇಂದು ಪ್ರಕಟಣೆಯಲ್ಲಿ ತಿಸಿದ್ದಾರೆ.
ಜನ ನನ್ನನ್ನು ಕೀಳಾಗಿ ಕಾಣುವುದರ ಬದಲು, ನನ್ನ ಸಾಧನೆಗಳ ಕುರಿತು ಹೆಮ್ಮೆಪಡಬೇಕು ಎಂದು ಪರೋಕ್ಷವಾಗಿ ಬಿಪ್ಲವ್ ದೇಬ್ ​ಗೆ ತಿರುಗೇಟು ನೀಡಿದ್ದಾರೆ. ಜೊತೆಗೆ ಕಂದು ಬಣ್ಣ ಹೊಂದಿರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ ಎಂದು 1997ರಲ್ಲಿ ವಿಶ್ವ ಸುಂದರಿ ಕಿರೀಟ ಧರಿಸಿದ್ದ ಡಯಾನ ಹೇಳಿದ್ದಾರೆ.
ಸಿಎಂ ಹೇಳಿಕೆಯಿಂದ ನನಗೆ ನೋವಾಗಿದೆ. ದೇಬ್ ಅವರು ಪ್ರಮುಖ ಹುದ್ದೆಯಲ್ಲಿದ್ದಾರೆ, ಅಂಥವರು ಹೇಳಿಕೆ ನೀಡುವಾಗ ಎಚ್ಚರಿಕೆ ವಹಿಸಬೇಕು ಎಂದು ಡಯಾನ ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT