’ಫನ್ನಿ ಖಾನ್' ಬಿಡುಗಡೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ 
ಬಾಲಿವುಡ್

’ಫನ್ನಿ ಖಾನ್' ಬಿಡುಗಡೆಗೆ ಸುಪ್ರೀಂ ಕೋರ್ಟ್ ಹಸಿರು ನಿಶಾನೆ

ಬಾಲಿವುಡ್ ನಟ ಅನಿಲ್ ಕಪೂರ್ ಮುಂದಿನ ಚಿತ್ರ ’ಫನ್ನಿ ಖಾನ್’ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನವದೆಹಲಿ: ಬಾಲಿವುಡ್ ನಟ ಅನಿಲ್ ಕಪೂರ್ ಮುಂದಿನ ಚಿತ್ರ ’ಫನ್ನಿ ಖಾನ್’ ಬಿಡುಗಡೆಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಚಲನಚಿತ್ರದ ವಿತರಣೆ ಹಕ್ಕುಗಳಲ್ಲಿ ವಿಆವಾದ ಉಂತಾಗಿದ್ದ ಕಾರಣ ಚಿತ್ರ ನಿರ್ಮಾಪಕ ವಾಶು ಭಗ್ನಾನಿ ಚಿತ್ರ ಬಿಡುಗಡೆಗೆ ತಡೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು.
ಇದೀಗ ಸುಪ್ರೀಂ ಕೋರ್ಟ್ ತಡೆ ನೀಡಲು ನಿರಾಕರಿಸಿರುವ ಕಾರಣ ನಿಗದಿಯಂತೆ ಚಿತ್ರವು ಇದೇ ಆಗಸ್ಟ್ 3ರಂದು ತೆರೆಗೆ ಬರಲಿದೆ.
ಚಿತ್ರದಲ್ಲಿ ನಟ ಅನಿಲ್ ಕಪೂರ್ ಆರ್ಕೆಸ್ಟ್ರಾ ಸಿಂಗರ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ಗಾಯಕ ಮಹಮದ್ ರಫಿ ಹಾಗೂ ಶಮ್ಮಿ ಕಪೂರ್ ಅಪ್ಪಟ ಅಭಿಮಾನಿಯಾಗಿ ಕಾಣಿಸಿಕೊಳ್ಳುವ ಅನಿಲ್ ತಾವು  ರಫಿ ಹಾಗೂ ಶಮ್ಮಿಯನ್ನು ದೇವರೆಂದು ಪೂಜಿಸುತ್ತಾರೆ ಮತ್ತು ಅವರ ಹಾಡುಗಳನ್ನು ಹಾಡುತ್ತಾರೆ.
ಸಂಗೀತ ಪ್ರಧಾನವಾದ ಈ ಚಿತ್ರದಲ್ಲಿ ಅನಿಲ್ ತಂದೆ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು ಅವರು ಗಾಯಕರಾಗುವ ಮೂಲಕ ತನ್ನ ಮಗಳ ಕನಸನ್ನು ನೆರವೇರಿಸಲು ಬಯಸುವ ಭಾವನಾತ್ಮಕ ಪಾತ್ರದಲ್ಲಿ ನಟಿಸಿದ್ದಾರೆ.
ಅತುಲ್ ಮಂಜ್ರೇಕರ್ ಅವರ ಈ ಚಿತ್ರದಲ್ಲಿ ಐಶ್ವರ್ಯಾ ರೈ ಬಚ್ಚನ್ ಹಾಗು ರಾಜ್ ಕುಮಾರ್ ರಾವ್ ಸೇರಿ ಅನೇಕ ನಟರ ಅಭಿನಯವಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!