ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪ್ರಿಯಾಂಕಾ ಚೋಪ್ರಾ - ನಿಕ್ ಜೋನಸ್
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶನಿವಾರ ಅಮೆರಿಕದ ಗಾಯಕ ನಿಕ್ ಜೋನಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಜೋಧಪುರ್: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರು ಶನಿವಾರ ಅಮೆರಿಕದ ಗಾಯಕ ನಿಕ್ ಜೋನಸ್ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.
ಇಂದು ಜೋಧಪುರದ ಉಮೈದ್ ಭವನದಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಬಾಲಿವುಡ್ ನಟಿ ಪ್ರಿಯಾಂಕಾ ಹಾಗೂ ಹಾಲಿವುಡ್ ಗಾಯಕ ನಿಕ್ ಅವರು ಪರಸ್ಪರ 'I Do'(ನಾನು ಒಪ್ಪಿದ್ದೇನೆ) ಎಂದು ಹೇಳುವ ಮೂಲಕ ಸತಿ-ಪತಿಗಳಾದರು.
ಈ ವೇಳೆ ಪ್ರಿಯಾಂಕಾ ತಾಯಿ ಮಧು ಚೋಪ್ರಾ, ಸಹೋದರ ಸಿದ್ಧಾರ್ಥ ಮತ್ತು ಸೋದರ ಸಂಬಂಧಿ ಪರಿಣೀತಿ ಚೋಪ್ರಾ, ನಿಕ್ ಪೋಷಕರಾದ ಪೌಲ್ ಕೇವಿನ್, ಡೇನಿಸ್, ಸಹೋದರರ ಕೇವಿನ್ ಮತ್ತು ಆತನ ಪತ್ನಿ ಡೇನಿಲ್ ಸೇರಿದಂತೆ ಹಲವು ಆಪ್ತರು ಉಪಸ್ಥಿತರಿದ್ದರು.
ನಾಳೆ ಹಿಂದೂ ಶೈಲಿಯಲ್ಲಿ ಪ್ರಿಯಾಂಕಾ ಹಾಗೂ ನಿಕ್ ವಿವಾಹ ನೆರವೇರಲಿದೆ.
ಪ್ರಿಯಾಂಕಾ ಚೋಪ್ರಾ ಅವರು ಹಿಂದೂ ಶೈಲಿಯ ವಿವಾಹಕ್ಕಾಗಿ ಅಬುಜಾನಿ-ಸಂದೀಪ್ ಕೋಸ್ಲಾ ವಿಶೇಷವಾಗಿ ವಿನ್ಯಾಸಗೊಳಿಸಿರುವ ವಸ್ತ್ರ ಧರಿಸಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.