ಬಾಲಿವುಡ್

'ಮಣಿಕರ್ಣಿಕಾ'ದಲ್ಲಿ ಯಾವುದೇ ಆಕ್ಷೇಪಾರ್ಹ ದೃಶ್ಯ ಇಲ್ಲ: ನಿರ್ಮಾಪಕರ ಸ್ಪಷ್ಟನೆ

Lingaraj Badiger
ಮುಂಬೈ: ಝಾನ್ಸಿ ರಾಣಿ ಲಕ್ಷ್ಮಿಬಾಯಿ ಜೀವನ ಆಧಾರಿತ, ಕಂಗನಾ ರಣೌತ್ ​ಅಭಿನಯದ ಐತಿಹಾಸಿಕ ಚಿತ್ರ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ'ಯಲ್ಲಿ ಯಾವುದೇ ಆಕ್ಷೇಪಾರ್ಹ ದೃಶ್ಯಗಳಿಲ್ಲ ಮತ್ತು ಇತಿಹಾಸವನ್ನೂ ತಿರುಚಲಾಗಿಲ್ಲ ಎಂದು ಚಿತ್ರದ ನಿರ್ಮಾಪಕರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.
'ಮಣಿಕರ್ಣಿಕಾ'ದಲ್ಲಿ ಝಾನ್ಸಿ ರಾಣಿ ಲಕ್ಷ್ಮಿಬಾಯಿ ವ್ಯಕ್ತಿತ್ವಕ್ಕೆ ಧಕ್ಕೆಯುಂಟುಮಾಡುತ್ತಿದ್ದಾರೆ ಮತ್ತು ಇತಿಹಾಸವನ್ನು ತಪ್ಪಾಗಿ ತೋರಿಸಲಾಗುತ್ತಿದೆ ಎಂದು ಆರೋಪಿಸಿ ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಿಸಿದ ಹಿನ್ನೆಲೆಯಲ್ಲಿ ಚಿತ್ರದ ನಿರ್ಮಾಪಕ ಕಮಲ್ ಜೈನ್ ಅವರು ಈ ಸ್ಪಷ್ಟನೆ ನೀಡಿದ್ದಾರೆ.
ಒಬ್ಬ ಜವಾಬ್ದಾರಿಯುತ ನಿರ್ಮಾಪಕನಾಗಿ, ರಾಣಿ ಲಕ್ಷ್ಮಿಬಾಯಿ ಪಾತ್ರದ ಗೌರವಕ್ಕೆ ಯಾವುದೇ ಧಕ್ಕೆ ಬರದಂತೆ ನೋಡಿಕೊಂಡಿದ್ದೇವೆ ಮತ್ತು ಈ ಸಂಬಂಧ ಇತಿಹಾಸಕರಾರನ್ನು ಹಾಗೂ ಸಂಶೋಧಕರಿಂದ ಮಾಹಿತಿ ಪಡೆದುಕೊಳ್ಳಲಾಗಿದೆ. ರಾಣಿ ಲಕ್ಷ್ಮಿಬಾಯಿ ಒಬ್ಬ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದು, ದೇಶದ ಅತ್ಯಂತ ಗೌರವಯುತ ವ್ಯಕ್ತಿಯಾಗಿದ್ದಾರೆ ಮತ್ತು ಚಿತ್ರದಲ್ಲೂ ಅದನ್ನೇ ತೋರಿಸಲಾಗಿದೆ ಎಂದು ಜೈನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಚಿತ್ರದಲ್ಲಿ ರಾಣಿ ಲಕ್ಷ್ಮಿಬಾಯಿಯನ್ನು ಅತ್ಯಂತ ಹೆಚ್ಚು ಗೌರವಾನ್ವಿತ ರೀತಿಯಲ್ಲಿ ತೋರಿಸಲಾಗಿದ್ದು, ಇದು ಪ್ರತಿ ಮಕ್ಕಳಿಗೂ ಸ್ಪೂರ್ತಿಯಾಗುವಂತಿದೆ ಎಂದು ಹೇಳಿದ್ದಾರೆ.
SCROLL FOR NEXT