ಸಲ್ಮಾನ್ ಖಾನ್ 
ಬಾಲಿವುಡ್

ಕೃಷ್ಣಮೃಗ ಬೇಟೆ ಪ್ರಕರಣ: ಜೋಧ್ ಪುರ ಕೋರ್ಟ್ ಗೆ ಹಾಜರಾದ ಸಲ್ಮಾನ್ ಖಾನ್

ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಗುರುವಾರ ಜೋಧ್ ಪುರ....

ಜೋಧ್ ಪುರ: ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ ಆರೋಪ ಎದುರಿಸುತ್ತಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು ಗುರುವಾರ ಜೋಧ್ ಪುರ ಕೋರ್ಟ್ ನಲ್ಲಿ ಅಂತಿಮ ವಿಚಾರಣೆಗೆ ಹಾಜರಾದರು. 
ಅಂತಿಮ ವಿಚಾರಣೆವರೆಗೆ ಆರೋಪಿಗೆ ಖುದ್ದು ವಿಚಾರಣೆಯಿಂದ ವಿನಾಯ್ತಿ ನೀಡಲಾಗಿತ್ತು. ಆದರೆ ಇಂದು ನಡೆದ ಅಂತಿಮ ವಿಚಾರಣೆಗಾಗಿ ಚೀಫ್ ಜ್ಯುಡಿಸಿಯಲ್ ಮ್ಯಾಜಿಸ್ಟ್ರೇಟ್ ಮುಂದೆ ಸಲ್ಮಾನ್ ಖಾನ್ ಹಾಜರಾಗಿದ್ದಾರೆ ಎಂದು ಅವರ ವಕೀಲ ಎಚ್ ಎಂ ಸಾರಸ್ವತ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅನಧಿಕೃತ ಶಸ್ತ್ರಾಸ್ತ್ರಗಳನ್ನು ಬಳಸಿ, ಅಳಿವಿನಂಚಿನಲ್ಲಿರುವ ಕೃಷ್ಣಮೃಗವನ್ನು ಕಂಕಣಿ ಗ್ರಾಮದಲ್ಲಿ ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಸೆಪ್ಟೆಂಬರ್ 13ರಿಂದ ಜೋಧ್ ಪುರ ಕೋರ್ಟ್ ನಲ್ಲಿ ಅಂತಿಮ ವಿಚಾರಣೆ ಆರಂಭವಾಗಿದೆ. 
ಅಕ್ಟೊಬರ್ ೧, ೧೯೯೮ ರಂದು 'ಹಮ್ ಸಾಥ್ ಸಾಥ್ ಹೈ' ಸಿನೆಮಾ ಚಿತ್ರೀಕರಣದ ವೇಳೆ ಸಲ್ಮಾನ್ ಖಾನ್ ಅವರು ಕೃಷ್ಣಮೃಗಗಳನ್ನು ಬೇಟೆಯಾಡಿದ್ದು, ಅವರ ಜೊತೆ ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ನಟರಾದ ಸೈಫ್ ಅಲಿ ಖಾನ್, ಸೋನಾಲಿ ಬೇಂದ್ರೆ, ಟಬು ಮತ್ತು ನೀಲಂ ಅವರನ್ನು ಸಹ ಆರೋಪಿಗಳನ್ನಾಗಿ ಮಾಡಲಾಗಿದೆ.
ಕೃಷ್ಣಮೃಗ ಬೇಟೆಗೆ ಸಂಬಂಧಿಸಿದಂತೆ ಶಸ್ತ್ರಾಸ್ತ್ರ ಕಾಯ್ದೆಯಡಿ ಸಲ್ಮಾನ್ ಖಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT