ಚಂಡೀಗಢ: ಸಂಜಯ್ ಲೀಲಾ ಭನ್ಸಾಲಿ ನಿರ್ದೇಶನದ ವಿವಾದಾತ್ಮಕ ಬಾಲಿವುಡ್ ಚಿತ್ರ ಪದ್ಮಾವತ್ ಬಿಡುಗಡೆಗೆ ಹರಿಯಾಣದಲ್ಲಿ ಬಿಜೆಪಿ ಸರ್ಕಾರ ನಿಷೇಧ ಹೇರಿದೆ.
ಜನವರಿ 25ರಂದು ದೇಶಾದ್ಯಂತ ತೆರೆ ಕಾಣುತ್ತಿರುವ ಪದ್ಮಾವತ್ ಚಿತ್ರಕ್ಕೆ ರಾಜ್ಯದಲ್ಲಿ ನಿಷೇಧ ಹೇರಲಾಗಿದೆ ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜಿ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಪದ್ಮಾವತಿ/ಪದ್ಮಾವತ್ ಚಿತ್ರ ನಿಷೇಧಿಸಲಾಗಿದೆ ಎಂದು ವಿಜಿ ಟ್ವೀಟ್ ಮಾಡಿದ್ದಾರೆ.
ದೀಪಿಕಾ ಪಡುಕೋಣೆ, ರಣವೀರ್ ಸಿಂಗ್ ಹಾಗೂ ಶಾಹಿದ್ ಕಪೂರ್ ಅಭಿನಯದ ಪದ್ಮಾವತಿ ಚಿತ್ರಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸೆನ್ಸಾರ್ ಮಂಡಳಿ ಚಿತ್ರದ ಹೆಸರು ಪದ್ಮಾವತ್ ಎಂದು ಹಾಗೂ ಇತರೆ ಕೆಲ ಬದಲಾವಣೆ ಮಾಡಿದ ನಂತರ ಚಿತ್ರ ಬಿಡುಗಡೆಗೆ ಅನುಮತಿ ನೀಡಿದೆ.