ಕೇಂದ್ರ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಷಿ 
ಬಾಲಿವುಡ್

ಪದ್ಮಾವತ್ ವಿವಾದ: ಕರ್ಣಿ ಸೇನಾ ಒತ್ತಡಕ್ಕೆ ಮಣಿದ ಸೆನ್ಸಾರ್ ಬೋರ್ಡ್ ಮುಖ್ಯಸ್ಥ

ಜ್ಹೀ ಜೈಪುರ ಸಾಹಿತ್ಯ ಉತ್ಸವದಲ್ಲಿ ನಾಳೆ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ಅಧ್ಯಕ್ಷ ...

ಜೈಪುರ: ಜೈಪುರ ಸಾಹಿತ್ಯ ಉತ್ಸವದಲ್ಲಿ ನಾಳೆ ಕೇಂದ್ರ ಚಲನಚಿತ್ರ ಪ್ರಮಾಣಪತ್ರ ಮಂಡಳಿ ಅಧ್ಯಕ್ಷ ಪ್ರಸೂನ್ ಜೋಶಿ ಅವರು ಭಾಗವಹಿಸುತ್ತಿಲ್ಲ. ಅವರು ಸಾಹಿತ್ಯ ಉತ್ಸವದಲ್ಲಿ ನಾಳೆ ನಡೆಯಲಿರುವ ಚರ್ಚೆಯೊಂದರಲ್ಲಿ ಭಾಗವಹಿಸಬೇಕಾಗಿತ್ತು. ಸೆನ್ಸಾರ್ ಮಂಡಳಿ ಪದ್ಮಾವತ್ ಚಿತ್ರ ಬಿಡುಗಡೆಗೆ ಅನುಮತಿ ನೀಡಿರುವುದಕ್ಕೆ ರಜಪೂತ ಕರ್ಣಿ ಸೇನಾದಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತು ಬೆದರಿಕೆಗಳು ಬರುತ್ತಿರುವುದರಿಂದ ಪ್ರಸೂನ್ ಜೋಷಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಈ ವರ್ಷ ಜೈಪುರ ಸಾಹಿತ್ಯ ಉತ್ಸವದಲ್ಲಿ ಭಾಗವಹಿಸುತ್ತಿಲ್ಲ. ಸಾಹಿತ್ಯ ಮತ್ತು ಕಾವ್ಯಪ್ರೇಮಿಗಳ ಜೊತೆ ಈ ಅದ್ಭುತ ಕ್ಷಣವನ್ನು ಕಳೆಯುವುದನ್ನು ತಪ್ಪಿಸಿಕೊಳ್ಳುತ್ತಿದ್ದೇನೆ ಎನ್ನುವ ಬೇಸರವುಂಟಾಗುತ್ತಿದೆ. ಕಾರ್ಯಕ್ರಮಕ್ಕೆ ಯಾವುದೇ ತೊಂದರೆಯಾಗಬಾರದು ಎಂದು ಮತ್ತು ಕಾರ್ಯಕ್ರಮ ಆಯೋಜಕರಿಗೆ ಮತ್ತು ಭಾಗವಹಿಸುತ್ತಿರುವವರಿಗೆ ಯಾವುದೇ ಸಮಸ್ಯೆಯುಂಟಾಗಬಾರದು. ಸಾಹಿತ್ಯ ಪ್ರೇಮಿಗಳು ತಮ್ಮ ಬರವಣಿಗೆ ಮತ್ತು ಸ್ವಂತಿಗೆ ಬಗ್ಗೆ ಗಮನಹರಿಸಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿಕೊಳ್ಳುತ್ತೇನೆ ಎಂದು ಪ್ರಸೂನ್ ಜೋಷಿ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮೈನ್ ಔರ್ ವೊಹ್: ಕನ್ವರ್ಸೇಷನ್ ವಿತ್ ಮೈಸೆಲ್ಫ್' ಎಂಬ ಚರ್ಚಾಕ್ರಮವೊಂದರಲ್ಲಿ ಜೋಷಿಯವರು ಭಾಗವಹಿಸಬೇಕಾಗಿತ್ತು.
ಜೈಪುರ ಸಾಹಿತ್ಯ ಉತ್ಸವದಲ್ಲಿ ಜೋಷಿಯವರನ್ನು ಭಾಗವಹಿಸಲು ಬಿಡುವುದಿಲ್ಲ ಎಂದು ಶ್ರೀ ರಜಪೂತ್ ಕರ್ನಿ ಸೇನಾ ಬೆದರಿಕೆಯೊಡ್ಡಿತ್ತು.
ಪದ್ಮಾವತ್ ಚಿತ್ರ ಬಿಡುಗಡೆಗೆ ಸಂಬಂಧಪಟ್ಟಂತೆ ನಾನು ನನ್ನ ಕೆಲಸ ಮಾಡಿದ್ದೇನೆ. ಈ ವಿಷಯವನ್ನು ಅತ್ಯಂತ ಸೂಕ್ಷ್ಮವಾಗಿ ಮತ್ತು ಸಮತೋಲನವಾಗಿ ತೆಗೆದುಕೊಂಡಿದ್ದೇನೆ. ಸಮಾಜದ ಬಗ್ಗೆ ಕಾಳಜಿಯಿಟ್ಟುಕೊಂಡು ಸಿನಿಮಾದವರ ಕ್ಯಾನ್ವಾಸ್ ನೋಡಿಕೊಂಡು ನಾವು ಚಿತ್ರಕ್ಕೆ ಪ್ರಮಾಣಪತ್ರ ನೀಡಿ ಬಿಡುಗಡೆಗೆ ಒಪ್ಪಿಗೆ ನೀಡಿದ್ದೇವೆ. ಪ್ರತಿಯೊಬ್ಬರಲ್ಲಿಯೂ ಪರಸ್ಪರ ನಂಬಿಕೆಯನ್ನು ಉಳಿಸಿಕೊಳ್ಳುವುದು ಮುಖ್ಯವಾಗಿರುತ್ತದೆ ಎಂದು ಪ್ರಸೂನ್ ಜೋಷಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT