ಸುದೀಪ್ 
ಬಾಲಿವುಡ್

ದಬಾಂಗ್ ಸ್ಟೈಲ್ ನಲ್ಲಿ ಬಾಲಿವುಡ್ ಗೆ ಸುದೀಪ್ ಮರಳಿ ಎಂಟ್ರಿ!

ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರೊಂದಿಗೂ ಸುದೀಪ್ ಅಭಿನಯಿಸಲಿದ್ದಾರೆ. ಸೊಹಾಲಿ ಖಾನ್ ಪ್ರೋಡಕ್ಷನ್ ನಲ್ಲಿ ಮೂಡಿಬರುತ್ತಿರುವ ದಬಾಂಗ್ -3 ಸುದೀಪ್ ಅಭಿನಯಿಸುತ್ತಿದ್ದಾರೆ.

ಪ್ರಸ್ತುತ ಚಿತ್ರರಂಗದಲ್ಲಿ ಕಿಚ್ಚ ಸುದೀಪ್  ಅತ್ಯುತ್ತಮ  ಸ್ಥಾನದಲ್ಲಿದ್ದಾರೆ. ಕನ್ನಡದ ಮೂರು ಚಿತ್ರಗಳನ್ನು ಹೊರತುಪಡಿಸಿ  ತೆಲುಗಿನ ಸೂಪರ್ ಸ್ಟಾರ್  ಚಿರಂಜೀವಿ ಅವರೊಂದಿಗೆ ಸೈರಾ ನರಸಿಂಹ ರೆಡ್ಡಿ ಚಿತ್ರದ  ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ತಮಿಳಿನಲ್ಲಿ ಧನುಸ್ ಅವರೊಂದಿಗಿನ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಹಾಲಿವುಡ್ ನ ರೈಸನ್ ಚಿತ್ರದಲ್ಲೂ ನಟಿಸಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ.

 ಇವುಗಳ ಜೊತೆಗೆ ಬಾಲಿವುಡ್ ನಲ್ಲಿ ಸೂಪರ್ ಸ್ಟಾರ್  ಸಲ್ಮಾನ್ ಖಾನ್ ಅವರೊಂದಿಗೂ ಸುದೀಪ್  ಅಭಿನಯಿಸಲಿದ್ದಾರೆ. ಸೊಹಾಲಿ ಖಾನ್ ಪ್ರೋಡಕ್ಷನ್ ನಲ್ಲಿ ಮೂಡಿಬರುತ್ತಿರುವ ದಬಾಂಗ್ -3 ಸುದೀಪ್ ಅಭಿನಯಿಸುತ್ತಿದ್ದಾರೆ.
ಈ ಚಿತ್ರವನ್ನು ಪ್ರಭುದೇವ ನಿರ್ದೇಶನ ಮಾಡುತ್ತಿದ್ದು, ಚಿತ್ರದಲ್ಲಿ ನಟಿಸಲು ಸುದೀಪ್ ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಡಿಸೆಂಬರ್ ನಲ್ಲಿ ಸುದೀಪ್ ಶೂಟಿಂಗ್ ನಲ್ಲಿ ಭಾಗಿಯಾಗಲಿದ್ದಾರೆ .
ಟೈಗರ್ ಜಿಂದ ಹೈ ಚಿತ್ರದಲ್ಲೂ ಸುದೀಪ್ ನಟಿಸುತ್ತಿದ್ದಾರೆ ಎಂಬ ಸುದ್ದಿ ಬಿ-ಟೌನ್ ನಲ್ಲಿ ಇತ್ತೀಚಿಗೆ ಸುದ್ದಿಯಾಗಿತ್ತು. ಸದ್ಯ ಸುದೀಪ್ ವಿದೇಶದಲ್ಲಿದ್ದು,  ದಬಾಂಗ್ -3 ನಿರ್ಮಾಪಕರು ಸುದೀಪ್ ಅವರನ್ನು ಸಂಪರ್ಕಿಸಿದ್ದು, ಗ್ರೀನ್ ಸಿಗ್ನಲ್ ಪಡೆದುಕೊಂಡಿದೆ. ಆದರೆ, ಅವರ ಪಾತ್ರದ ಬಗ್ಗೆ ಚಿತ್ರತಂಡ ನಿರ್ಧರಿಸಲಿದೆ.
 ತದನಂತರ  ರಾಣ್, ರಕ್ತ ಚರಿತ ಭಾಗ 1 ಹಾಗೂ 2 ರಲ್ಲಿ ಅವರು ಕೆಲಸ ಮಾಡಿದ್ದರು.  ತೆಲುಗಿನಲ್ಲಿ ಸುದೀಪ್ ಅಭಿನಯಿಸಿದ ಈಗಾ ಸಿನಿಮಾ ಹಿಂದಿಯಲ್ಲಿ ಮಾಖಿ ಆಗಿ ಬಿಡುಗಡೆ ಆಗಿತ್ತು. 8 ವರ್ಷಗಳ ನಂತರ ಸುದೀಪ್ ಬಾಲಿವುಡ್ ಪ್ರವೇಶಿಸುತ್ತಿದ್ದಾರೆ.
ಈ ಮಧ್ಯೆ  ಕನ್ನಡದ ದಿ ವಿಲನ್, ಪೈಲ್ವಾನ್ ಹಾಗೂ ಕೋಟಿಗೊಬ್ಬ-3   ಈಗಾಗಲೇ ಚಿತ್ರೀಕರಣ ಮುಗಿಸಿದ್ದು, ಬಿಡುಗಡೆಗೆ ರೆಡಿಯಾಗಿವೆ.  ಇದರ ಜೊತೆಗೆ ಇತರ ನಾಲ್ಕು ಭಾಷೆಗಳ  ಚಿತ್ರಗಳ ಮೂಲಕ ಸುದೀಪ್ ತನ್ನ ಅಭಿಮಾನಿಗಳಿಗೆ ರಸದೌತಣ ಉಣಬಡಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!