ನವದೆಹಲಿ: ಶಿವಸೇನೆಯ ಮುಖ್ಯಸ್ಥರಾಗಿದ್ದ ಬಾಳಾಸಾಹೇಬ್ ಠಾಕ್ರೆ ಅವರ ಜೀವನ ಚರಿತ್ರೆ ಸಿನಿಮಾ ರೂಪದಲ್ಲಿ ತೆರೆ ಮೇಲೆ ಬರುತ್ತಿದ್ದು, ಬಾಲಿವುಡ್ ನಟ ನವಾಜುದ್ದೀನ್ ಸಿದ್ದಿಕಿ ಠಾಕ್ರೆ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಸಿನಿಮಾ ಘೋಷಣೆಯಾದಾಗಿನಿಂದಲೂ ಈ ಚಿತ್ರ ಸುದ್ದಿಯಲ್ಲಿದೆ. ಈಗಲೂ ಈ ಸಿನಿಮಾದ ಫೋಟೊ ಸದ್ದು ಮಾಡುತ್ತಿದ್ದು, ನವಾಜುದ್ದೀನ್ ಸಿದ್ದಿಕಿ ಬಾಳಾ ಸಾಹೇಬ್ ಠಾಕ್ರೆಯ ಪಾತ್ರದಲ್ಲಿ ತಯಾರಾಗಿರುವುದನ್ನು ಸಿನಿಮಾ ವಿಮರ್ಶಕ, ವಿಶ್ಲೇಷಕ ತರಣ್ ಆದರ್ಶ್ ಟ್ವೀಟ್ ಮಾಡಿದ್ದು, ಸಿದ್ದಿಕಿ ಬಾಳ್ ಠಾಕ್ರೆ ಅವರ ರೀತಿಯಲ್ಲೇ ಕಾಣುತ್ತಿದ್ದಾರೆ.
2019 ರ ಜನವರಿ 23 ರಂದು ಬಿಡುಗಡೆಯಾಗಲಿರುವ ಸಿನಿಮಾಗೆ ಶಿವಸೇನೆಯ ರಾಜ್ಯಸಭಾ ಸದಸ್ಯ, ಶಿವಸೇನೆಯ ವಕ್ತಾರ ಸಂಜಯ್ ರಾವುತ್ ಚಿತ್ರಕಥೆ ಬರೆದಿದ್ದು, ಕಾರ್ನಿವಲ್ ಮೋಷನ್ ಪಿಕ್ಚರ್ಸ್ ಜೊತೆಗೂಡಿ ನಿರ್ಮಾಣವನ್ನೂ ಮಾಡಿದ್ದಾರೆ.