ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ 
ಬಾಲಿವುಡ್

ಪ್ರಿಯಾಂಕಾ ಚೋಪ್ರಾ, ನಿಕ್ ಜೋನಾಸ್ ನಿಶ್ಚಿತಾರ್ಥ: ಅಮೆರಿಕ ಮಾಧ್ಯಮಗಳ ವರದಿ

ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಬಹುಕಾಲದ ಗೆಳೆಯ....

ನ್ಯೂಯಾರ್ಕ್: ಹಾಲಿವುಡ್ ಮತ್ತು ಬಾಲಿವುಡ್ ನಲ್ಲಿ ಮಿಂಚುತ್ತಿರುವ ಪ್ರಿಯಾಂಕಾ ಚೋಪ್ರಾ ಅವರು ತಮ್ಮ ಬಹುಕಾಲದ ಗೆಳೆಯ ಹಾಗೂ ಅಮೆರಿಕದ ಪಾಪ್ ಗಾಯಕ ನಿಕ್ ಜೋನಾಸ್ ಅವರೊಂದಿಗೆ ನ್ಯೂಯಾರ್ಕ್ ನಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಅಮೆರಿಕ ಮಾಧ್ಯಮಗಳು ವರದಿ ಮಾಡಿವೆ.
ಒಂದು ವಾರದ ಹಿಂದೆಯೇ ಪ್ರಿಯಾಂಕಾ ಚೋಪ್ರಾ ಅವರ ನಿಶ್ಚಿತಾರ್ಥ ನಡೆದಿದೆ. ಪ್ರಿಯಾಂಕಾ ಅವರ 36ನೇ ಹುಟ್ಟುಹಬ್ಬದ ಸಂದರ್ಭದಲ್ಲಿ ನಿಕ್ ಜೋನಾಸ್ ಮಂಡಿಯೂರಿ ಕುಳಿತು ತನ್ನ ಪ್ರೇಮ ನಿವೇದನೆ ಮಾಡಿಕೊಂಡಿದ್ದು, ಅಂದೇ ಉಂಗುರ ಬದಲಾಯಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಪೀಪಲ್.ಕಾಮ್ ವರದಿ ಮಾಡಿದೆ.
ಇವರಿಬ್ಬರಿಗೂ ವಯಸ್ಸಿನಲ್ಲಿ 10 ವರ್ಷ ಅಂತರ ಇದ್ದು, ಪ್ರಿಯಾಂಕಾಗೆ 36 ವರ್ಷ ವಯಸ್ಸಾಗಿದ್ದರೆ, ನಿಕ್ ಜೋನಾಸ್‌ಗೆ ಇನ್ನೂ 25 ವರ್ಷ. 
ನ್ಯೂಯಾರ್ಕ್‌ನ ಟಿಫಾನಿ ಸ್ಟೋರ್‌ನಲ್ಲಿ ಎಂಗೇಜ್‍ಮೆಂಟ್ ಉಂಗುರ ಖರೀದಿಸುವ ಸಲುವಾಗಿ ಇಡೀ ಮಳಿಗೆಯನ್ನೇ ಒಂದು ದಿನದ ಮಟ್ಟಿಗೆ ಬುಕ್ ಮಾಡಿಕೊಂಡು ಬೇರೆಯರಿಗೆ ಪ್ರವೇಶ ನಿಷೇಧಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.
ಸದ್ಯಕ್ಕೆ ನಿಶ್ಚಿತಾರ್ಥ ಮಾಡಿಕೊಂಡಿರುವ ಈ ಜೋಡಿ ಇನ್ನೊಂದು ವರ್ಷದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಬಾಲಿವುಡ್‌ನ ಖ್ಯಾತ ನಿರ್ದೇಶಕ ಅಲಿ ಅಬ್ಬಾಸ್ ಜಫರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT