ನಟ ಜೀತೇಂದ್ರ 
ಬಾಲಿವುಡ್

47 ವರ್ಷಗಳ ಹಿಂದೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ, ನಟ ಜೀತೇಂದ್ರ ವಿರುದ್ಧ ಈಗ ಕೇಸ್ ದಾಖಲು

47 ವರ್ಷಗಳ ಹಿಂದೆ ಸಂಬಂಧಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಾಲಿವುಡ್ ಹಿರಿಯ...

ಶಿಮ್ಲಾ:  47 ವರ್ಷಗಳ ಹಿಂದೆ ಸಂಬಂಧಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಾಲಿವುಡ್ ಹಿರಿಯ ನಟ ಜೀತೇಂದ್ರ ಅವರ ವಿರುದ್ಧ ಶಿಮ್ಲಾ ಪೊಲೀಸರು ಬುಧವಾರ ಕೇಸ್ ದಾಖಲಿಸಿಕೊಂಡಿದ್ದಾರೆ. 
ಜೀತೇಂದ್ರ ಅವರು 1971ರಲ್ಲಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟನ ಸಂಬಂಧಿ ಮಹಿಳೆ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರಿನ ಆಧಾರದ ಮೇಲೆ ಛೋಟಾ ಶಿಮ್ಲಾ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷೆನ್ 354ರಡಿ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು ಮಹಿಳೆಯ ಹೇಳಿಕೆ ಪಡೆಯುವ ಸಾಧ್ಯತೆ ಇದೆ.
ಎರಡು ಪುಟಗಳ ದೂರಿನಲ್ಲಿ ನಟನ ವಿರುದ್ಧ 'ಲೈಂಗಿಕ ಕಿರುಕುಳ' ಪ್ರಕರಣದ ಎಫ್‌ಐಆರ್ ದಾಖಲಿಸಿಕೊಳ್ಳುವಂತೆ ದೂರಿನಲ್ಲಿ ತಿಳಿಸಿದ್ದಾರೆಂದು ಹಿಮಾಚಲ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.
ಆಗ ತನಗೆ 18 ವರ್ಷ, ಜಿತೇಂದ್ರ ಅವರಿಗೆ 28 ವರ್ಷ ವಯಸ್ಸಾಗಿತ್ತು. ಇಬ್ಬರೂ ಹೋಟೆಲ್ ರೂಮನ್ನು ಹಂಚಿಕೊಂಡಿದ್ದಾಗ ಈ ಘಟನೆ ನಡೆದಿದೆ ಎಂದು ಆರೋಪಿಸಿದ್ದಾರೆ ಮಹಿಳೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೀತೇಂದ್ರ ಪರ ವಕೀಲರು, ಇದೊಂದು ಆಧಾರ ರಹಿತ ಆರೋಪ ಎಂದು ತಳ್ಳಿಹಾಕಿದ್ದಾರೆ.
ತನ್ನ ಕಕ್ಷಿದಾರರು ಸಹ ಈ ಬಗ್ಗೆ ತಮಗೆ ಮಾಹಿತಿ ನೀಡಿದ್ದು, ಆ ರೀತಿಯ ಯಾವುದೇ ಘಟನೆ ನಡೆದಿಲ್ಲ ಎಂದಿದ್ದಾರೆ. ಈ ಆರೋಪ ನಿರಾಧಾರ ಹಾಗೂ ಹಾಸ್ಯಸ್ಪದವಾಗಿದೆ. ಮುಖ್ಯವಾಗಿ 50 ವರ್ಷಗಳ ಹಿಂದೆ ನಡೆದಿರುವಂತಹ ಘಟನೆಯನ್ನು ತಿರುಚಿದರೆ ಯಾವುದೇ ಪೊಲೀಸ್ ಅಥವಾ ನ್ಯಾಯಾಲಯ ಅದನ್ನು ಬೆಂಬಲಿಸಲ್ಲ ಎಂದು ಜೇತೇಂದ್ರ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ

'ನನ್ನ ಜೊತೆ ಮಲಗಿದ್ರೆ ಸಿನಿಮಾ ಅವಕಾಶ’: ಚಿಕ್ಕ ವಯಸ್ಸಿಗೆ ಚಿತ್ರರಂಗ ಬಿಟ್ಟಿದ್ದೇಕೆ; ಸೌಥ್ ನಿರ್ದೇಶಕನ ಬಗ್ಗೆ ನಟಿ ಶಾಕಿಂಗ್ ಹೇಳಿಕೆ!

3 ಬಾರಿ ಸಿಎಂ ಕೂಡ ಸುರಕ್ಷಿತವಾಗಿಲ್ಲ: ಮಮತಾ ಬ್ಯಾನರ್ಜಿ ಮೇಲೆ ಚಾಕುವಿನಿಂದ ದಾಳಿಗೆ ಯತ್ನ; ಮಹಿಳೆ ಬಂಧನ

ವಿಚಿತ್ರವಾದ್ರೂ ಸತ್ಯ: ಅಪ್ರಾಪ್ತೆಯನ್ನು ಹಿಂಬಾಲಿಸಿ ಲೈಂಗಿಕ ದೌರ್ಜನ್ಯ; ರೋಬೋಟ್ ವಶಕ್ಕೆ ಪಡೆದ ಪೊಲೀಸರು!

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!