ರೋಹಿತ್ ಶೆಟ್ಟಿ, ರಣವೀರ್ 
ಬಾಲಿವುಡ್

ಭಾಯಿ ಈಸ್ ಬಾಯ್: ರೋಹಿತ್ ಶೆಟ್ಟಿಗಾಗಿ ಭಾವಾನಾತ್ಮಕ ವಿಡಿಯೋ ಶೇರ್ ಮಾಡಿದ ರಣವೀರ್!

ನಿನ್ನೆಯಷ್ಟೇ ಬೆಂಗಳೂರಿನಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಆರತಕ್ಷತೆ ಕಾರ್ಯಕ್ರಮ ಮುಗಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ , ತಾವೂ ಅಭಿನಯಿಸಿರುವ 'ಸಿಂಬಾ' ಚಿತ್ರದ ನಿರ್ದೇಶಕ ರೋಹಿತ್ ಶೆಟ್ಟಿ ಜೊತೆಗಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ನವದೆಹಲಿ: ನಿನ್ನೆಯಷ್ಟೇ ಬೆಂಗಳೂರಿನಲ್ಲಿ ದೀಪಿಕಾ ಪಡುಕೋಣೆ ಜೊತೆಗೆ ಆರತಕ್ಷತೆ ಕಾರ್ಯಕ್ರಮ ಮುಗಿಸಿದ ಬಾಲಿವುಡ್ ನಟ ರಣವೀರ್ ಸಿಂಗ್ , ತಾವೂ ಅಭಿನಯಿಸಿರುವ  'ಸಿಂಬಾ' ಚಿತ್ರದ ನಿರ್ದೇಶಕ ರೋಹಿತ್ ಶೆಟ್ಟಿ ಜೊತೆಗಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ಭಾಯಿ ಈಸ್ ಬಾಯ್ ಎಂಬ ಅಡಿಬರಹದಲ್ಲಿ ರೋಹಿತ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿ ವಿಡಿಯೋ ಶೇರ್ ಮಾಡಿದ್ದಾರೆ.

 ರೋಹಿತ್ ಶೆಟ್ಟಿ ನಿರ್ದೇಶನದ ಸಾಂಬಾ ಸಿನಿಮಾ ಚಿತ್ರೀಕರಣದ ಕೊನೆಯ ದಿನ ಹೇಗೆ ಕಾಣಿಸಿಕೊಳ್ಳುತ್ತಿದ್ದರು ಎಂಬುದನ್ನು ಈ ವಿಡಿಯೋದಲ್ಲಿ ರಣವೀರ್ ವಿವರಿಸಿದ್ದಾರೆ.

ರೋಹಿತ್ ಶೆಟ್ಟಿ ಅವರೊಂದಿಗೆ ಕೆಲಸ ಮಾಡುವ ಅವಕಾಶಕ್ಕಾಗಿ ಕಾಯುತ್ತಿದ್ದೆ.  ಆ ಸುರ್ವಣಕಾಶವನ್ನು ಅಂತಿಮವಾಗಿ ಪಡೆದೆ. ನಾನು ಏನು ನಿರೀಕ್ಷೆ ಮಾಡಿದ್ದೇನೂ ಅದಕ್ಕಿಂತಲೂ ಸಾವಿರ ಪಟ್ಟು ಹೆಚ್ಚಿಗೆ ಸಿಕ್ಕಿತು. ರೋಹಿತ್ ಶೆಟ್ಟಿ ಅವರ ಅತ್ಯಂತ ದೊಡ್ಡ ಅಭಿಮಾನಿ ಆಗಿರುವುದಾಗಿ ರಣವೀರ್ ಹೇಳಿದ್ದಾರೆ.

ಮುಂಬೈಯಲ್ಲಿ ರಣವೀರ್ ಅವರ ಆರತಕ್ಷತೆ ಕಾರ್ಯಕ್ರಮ ಮುಗಿದ ಬಳಿಕ ಡಿಸೆಂಬರ್ 3 ರಂದು  ಸಿಂಬಾ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆ.ಸಿಂಬಾ ತೆಲುಗು ಚಿತ್ರ ಟೆಂಪರ್ ಚಿತ್ರದ ರಿಮೇಕ್ ಆಗಿದ್ದು, ಡಿಸೆಂಬರ್ 28 ರಂದು ತೆರೆ ಮೇಲೆ ಮೂಡಿಬರಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಕಡಿವಾಣ: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ