ಕಂಗನಾ ರಣೌತ್, ಹೃತಿಕ್ ರೋಶನ್ 
ಬಾಲಿವುಡ್

#MeToo ಎಫೆಕ್ಟ್: ಹೃತಿಕ್ ರೋಶನ್ ವಿರುದ್ಧ ಮತ್ತೆ ಸಿಡಿದೆದ್ದ ಕಂಗನಾ ರಣೌತ್

#MeToo ಅಭಿಯಾನ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ...

#MeToo ಅಭಿಯಾನ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದರ ಬಾಲಿವುಡ್ ನಟಿ ಕಂಗನಾ ರಣೌತ್ ಅವರು ಬಾಲಿವುಡ್ ನಟ ಹೃತಿಕ್ ರೋಶನ್ ಅವರ ವಿರುದ್ಧ ಮತ್ತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಕಂಗನಾ ಹಾಗೂ ಹೃತಿಕ್ ನಡುವಿನ ಈಮೇಲ್ ಗಲಾಟೆ ಬಗ್ಗೆ ನಿಮಗೆ ಗೊತ್ತೇ ಇದೆ. ಈಗ ಮತ್ತೆ ಸಿಡಿದೆದ್ದಿರುವ ನಟಿ, ಹೃತಿಕ್ ರೋಶನ್ ಜೊತೆ ಯಾರೂ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.
ಇದು ನಮ್ಮನ್ನು ನಾವು ಅಭಿನಂದಿಸಿಕೊಳ್ಳುವ ಸಮಯವಲ್ಲ. ಏಕೆಂದರೆ "ಮಹಿಳೆಯರಿಗೆ ಸುರಕ್ಷಿತ ವಾತಾವರಣ ನಿರ್ಮಿಸಲು ನಾವು ಇನ್ನೂ ಸಾಕಷ್ಟು ದೂರ ಸಾಗಬೇಕಿದೆ"
ಕಂಗನಾ ರಣೌತ್ ವಿಡಿಯೋ ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.
ಚಿತ್ರೋದ್ಯಮದಲ್ಲಿ ಯುವತಿಯರಿಗೆ ಮದುವೆ ಹಾಗೂ ಚಿತ್ರದಲ್ಲಿ ನಟಿಸುವ ಅವಕಾಶ ನೀಡುವ ಸುಳ್ಳು ಭರವಸೆ ನೀಡಿ ವಂಚಿಸುವ ಹಲವು ಪುರುಷರು ಇದ್ದಾರೆ. ಅವರೆಲ್ಲರಿಗೂ ಶಿಕ್ಷೆಯಾಗಬೇಕು. ನಿರ್ದೇಶಕ ವಿಕಾಸ್ ಬಹ್ಲ್ ಗೆ ಏನೇನು ಆಗುತ್ತಿದೆಯೋ ಎಲ್ಲವೂ ಸರಿಯಾಗಿದೆ. ಆದರೆ ಉದ್ಯಮದಲ್ಲಿ ಮಹಿಳೆಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುವವರು ಇನ್ನೂ ಹಲವರಿದ್ದಾರೆ. ಅಂಥವರಿಗೆ ಶಿಕ್ಷೆ ಆಗಲೇಬೇಕು ಎಂದು ನಟಿ ಒತ್ತಾಯಿಸಿದ್ದಾರೆ.
ವಿಕಾಸ್ ಬಹ್ಲ್ ವಿರುದ್ಧ ಇಬ್ಬರು ನಟಿಯರು ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಂತರ ನಟಿಯರ ಬೆಂಬಲಕ್ಕೆ ನಿಂತಿದ್ದ ಹೃತಿಕ್ ರೋಶನ್ ಅವರು, ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವವರೊಂದಿಗೆ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!