ಮಾನ್ಸಿ ದೀಕ್ಷಿತ್ 
ಬಾಲಿವುಡ್

ಮುಂಬೈ ಮಾಡೆಲ್ ಬರ್ಬರ ಕೊಲೆ, ಸೂಟ್‌ಕೇಸ್‌ನಲ್ಲಿ ಮೃತದೇಹ ತುಂಬಿ ಬಿಸಾಡಿ ಹೋದ ವಿದ್ಯಾರ್ಥಿ ಸೈಯಿದ್!

20 ವರ್ಷದ ವಿದ್ಯಾರ್ಥಿಯೊಬ್ಬ ಮಾಡೆಲ್ ಅನ್ನು ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ತೆಗೆದುಕೊಂಡು ಹೋಗಿ ಬಿಸಾಡಿದ ಪ್ರಕರಣವೊಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ...

ಮುಂಬೈ: 20 ವರ್ಷದ ವಿದ್ಯಾರ್ಥಿಯೊಬ್ಬ ಮಾಡೆಲ್ ಅನ್ನು ಬರ್ಬರವಾಗಿ ಹತ್ಯೆ ಮಾಡಿ ಶವವನ್ನು ಸೂಟ್‌ಕೇಸ್‌ನಲ್ಲಿ ತುಂಬಿ ತೆಗೆದುಕೊಂಡು ಹೋಗಿ ಬಿಸಾಡಿದ ಪ್ರಕರಣವೊಂದು ಮಹಾರಾಷ್ಟ್ರದ ಮುಂಬೈನಲ್ಲಿ ನಡೆದಿದೆ. 
ಕೊಲೆಯಾದ ಮಾಡೆಲ್ 20 ವರ್ಷದ ಮಾನ್ಸಿ ದೀಕ್ಷಿತ್ ಎಂದು ತಿಳಿದುಬಂದಿದೆ. 20 ವರ್ಷದ ವಿದ್ಯಾರ್ಥಿ ಮುಜಾಮಿಲ್ ಸೈಯಿದ್ ಮಾಡೆಲ್ ಹತ್ಯೆ ಮಾಡಿ ಅಂಧೇರಿಯಿಂದ ಮಲಾಡ್ ಗೆ ಶವವನ್ನು ಸೂಟ್ ಕೇಸ್ ನಲ್ಲಿ ತೆಗೆದುಕೊಂಡು ಹೋಗಿ ಬಿಸಾಕಿದ್ದಾನೆ. 
ರಾಜಸ್ತಾನದ ಮಾನ್ಸಿ ದೀಕ್ಷಿತ್ ಮಾಡೆಲ್ ಆಗುವ ಕನಸು ಹೊತ್ತು ಮುಂಬೈಗೆ ಬಂದಿದ್ದಳು. ಈ ಮಧ್ಯೆ ಫೇಸ್ ಬುಕ್ ನಲ್ಲಿ ಮಾನ್ಸಿ ದೀಕ್ಷಿತ್ ಹಾಗೂ ಸೈಯಿದ್ ಪರಿಚಯವಾಗಿದೆ. ಸೋಮವಾರ ಮಧ್ಯಾಹ್ನ ಅಂಧೇರಿಯಲ್ಲಿ ಸೈಯಿದ್ ವಾಸವಿರುವ ಅಪಾರ್ಟ್ ಮೆಂಟ್ ನಲ್ಲಿ ಭೇಟಿಯಾಗಿದ್ದಾಳೆ. ಈ ವೇಳೆ ಇಬ್ಬರ ಮಧ್ಯೆ ಜಗಳ ನಡೆದು ಸೈಯಿದ್ ಕೈಗೆ ಸಿಕ್ಕ ವಸ್ತುವಿನಿಂದ ಹಲ್ಲೆ ಮಾಡಿದ್ದಾನೆ. 
ಗಂಭೀರವಾಗಿ ಗಾಯಗೊಂಡಿದ್ದ ಮಾನ್ಸಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆ. ಇದರಿಂದ ಗಾಬರಿಗೊಂಡ ಸೈಯಿದ್ ಕ್ಯಾಬ್ ನಲ್ಲಿ ಅಂಧೇರಿಯಿಂದ ಮಲಾಡ್ ಗೆ ಸೂಟ್‌ಕೇಸ್‌ನಲ್ಲಿ ಶವವನ್ನು ಸಾಗಿಸಿದ್ದಾನೆ. ನಂತರ ಮಲಾಡ್ ನ ನಿರ್ಜನ ಪ್ರದೇಶದಲ್ಲಿ ಶವ ಬಿಸಾಡಿ ಆಟೋ ರಿಕ್ಷಾದಲ್ಲಿ ಸೈಯಿದ್ ಹೊರಟಿದ್ದನ್ನು ಗಮನಿಸಿದ ಕ್ಯಾಬ್ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. 
ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಸೂಟ್‌ಕೇಸ್‌ ತೆರೆದು ನೋಡಿದಾಗ ಮಾಡೆಲ್ ಶವ ಪತ್ತೆಯಾಗಿದೆ. ಈ ಸಂಬಂಧ ಸೈಯಿದ್ ನನ್ನು ಪೊಲೀಸರು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಂತ್ಯ ಸನ್ನಿಹಿತ?: ಇರಾನ್ ನತ್ತ ಮುಖ ಮಾಡಿದ ಅಮೆರಿಕದ ಅತ್ಯಂತ ವಿಧ್ವಂಸಕ ಕ್ಷಿಪಣಿ

ಟಿಕೆಟ್ ಆಕಾಂಕ್ಷಿಗಳಿಂದ 50 ಸಾವಿರ ಸಂಗ್ರಹ; ಚುನಾವಣೆಯಿಂದ MNM ಹಿಂದೆ ಸರಿದು ಮಹಾಮೋಸ: ಕಮಲ್ ಹಾಸನ್ ವಿರುದ್ಧ ಭುಗಿಲೆದ್ದ ಆಕ್ರೋಶ!

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್

ವಿಶೇಷ ಪಡೆ, ಹತ್ತಾರು ಸೇನಾ ವಿಮಾನ: ಶತ್ರು ನೆಲದಲ್ಲಿ ಬಿದ್ದ ತನ್ನ ಪೈಲಟ್​ ನ್ನು ಅಮೆರಿಕ ರಕ್ಷಿಸಿದ್ದೇ ರೋಚಕ!

ಏ.10 ಕ್ಕೆ ರಾಜ್ಯಸಭಾ ಸದಸ್ಯರಾಗಿ ನಿತೀಶ್ ಕುಮಾರ್ ಪ್ರಮಾಣ ವಚನ ಸ್ವೀಕಾರ! ಸಿಎಂ ಸ್ಥಾನಕ್ಕೆ ರಾಜೀನಾಮೆ?

SCROLL FOR NEXT