ಡ್ರಗ್ಸ್ ಪ್ರಕರಣ: ಮಾಜಿ ಬಿಗ್ ಬಾಸ್ ಸ್ಪರ್ಧಿ, ಬಾಲಿವುಡ್ ನಟ ಅಜಾಜ್ ಖಾನ್ ಬಂಧನ
ನಿಷೇಧಿತ ಡ್ರಗ್ಸ್ ಸೇವನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿದೆ.
ಮುಂಬೈ:ನಿಷೇಧಿತ ಡ್ರಗ್ಸ್ ಸೇವನೆ ಆರೋಪದ ಹಿನ್ನೆಲೆಯಲ್ಲಿ ಬಾಲಿವುಡ್ ನಟ, ಬಿಗ್ ಬಾಸ್ ಮಾಜಿ ಸ್ಪರ್ಧಿ ಅಜಾಜ್ ಖಾನ್ ಅವರನ್ನು ಬಂಧಿಸಲಾಗಿದೆ. ನವಿ ಮುಂಬೈನ ಮಾದಕ ದ್ರವ್ಯ ನಿಯಂತ್ರಣ ದಳ ಪೋಲೀಸರು ನಟನನ್ನು ವಶಕ್ಕೆ ಪಡೆದಿದ್ದಾರೆ.
ಸೋಮವಾರ ರಾತ್ರಿ ಅಜಾಜ್ ಬಂಧನವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮುಂಬೈನ ಪ್ರಸಿದ್ಧ ಹೋಟೆಲ್ ಮೇಲೆ ಮಾದಕ ದ್ರವ್ಯ ನಿಯಂತ್ರಣ ದಳದ ಅಧಿಕಾರಿಗಳು ದಾಳಿ ನಡೆಸಿ ನಟನನ್ನು ಬಂಧಿಸಿದ್ದು ಬಂಧಿತನಿಂದ 2.3 ಗ್ರಾಂ ನಿಷೇಧಿತ ಎಂ/ಡಿ ಮಾತ್ರೆಗಳು, ಸೈಕೋಟ್ರೋಪಿಕ್ ಪದಾರ್ಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿಗ್ ಬಾಸ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿದ್ದ ಅಜಾಜ್ ಖಾನ್ ಅವರನ್ನು ಮಂಗಳವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಇಷ್ಟಕ್ಕೂ ಇದು ಅಜಾಜ್ ಖಾನ್ ಸಿಕ್ಕಿಹಾಕಿಕೊಳ್ಳುತ್ತಿರುವುದು ಮೊದಲೇನೂ ಅಲ್ಲ. ಇದಕ್ಕೆ ಎರಡು ವರ್ಷಗಳ ಹಿಂದೆ ಅಶ್ಲೀಲ ಚಿತ್ರ, ಸುಳ್ಳು ಸಾಂದೇಶಗಳನ್ನು ಕಳುಹಿಸುವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು. ಬಳಿಕ ಅವರು ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.