ನವದೆಹಲಿ: ಪುಣೆಯ ಫಿಲಂ ಮತ್ತು ಟೆಲಿವಿಷನ್ ಇನ್ಸಿಟ್ಯೂಟ್ ಆಫ್ ಇಂಡಿಯಾ (ಎಫ್'ಟಿಐಐ) ಅಧ್ಯಕ್ಷ ಸ್ಥಾನಕ್ಕೆ ನಟ ಅನುಪಮ್ ಖೇರ್ ಅವರು ಬುಧವಾರ ರಾಜೀನಾಮೆ ನೀಡಿದ್ದಾರೆಂದು ತಿಳಿದುಬಂದಿದೆ.
ಮಾಹಿತಿ ಮತ್ತು ಪ್ರಸಾರ ಇಲಾಖೆ ಸಚಿವ ರಾಜವರ್ಧನ ಸಿಂಗ್ ರಾಥೋಡ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅನುಪಮ್ ಖೇರ್ ಅವರು, ಸಮಯದ ಅಭಾವದಿಂದಾಗಿ ನೀಡಲಾಗಿರುವ ಜವಾಬ್ದಾರಿಯನ್ನು ನಿರ್ವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ.
ತಮ್ಮ ನಿರ್ಧಾರ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿಯೂ ಬರೆದುಕೊಂಡಿರುವ ಅನುಪಮ್ ಖೇರ್ ಅವರು, ಎಫ್'ಟಿಟಿಐ ಅಧ್ಯಕ್ಷ ಸ್ಥಾನದಿಂದ ಸಾಕಷ್ಟು ಕಲಿತುಕೊಂಡಿದ್ದೇನೆ. ಆದರೆ, ಅಂತರಾಷ್ಟ್ರೀಯ ಕಾರ್ಯಕ್ರಮಗಳು, ಸಮಯದ ಅಭಾವದಿಂದಾಗಿ ಸಂಸ್ಥೆಗಾಗಿ ಸಮಯ ಕಳೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆಂದು ಹೇಳಿದ್ದಾರೆ.
ಎಫ್'ಟಿಟಿಐ ಅಧ್ಯಕ್ಷ ಸ್ಥಾನಕ್ಕೆ ಅನುಪಮ್ ಖೇರ್ ಅವರನ್ನು ಕಳೆದ ವರ್ಷ ಅಕ್ಟೋಬರ್ 10 ರಂದು ಆಯ್ಕೆ ಮಾಡಲಾಗಿತ್ತು. ಅಂದಿನ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಸಚಿವೆಯಾಗಿದ್ದ ಸ್ಮೃತಿ ಇರಾನಿಯವರು ಅನುಪಮ್ ಖೇರ್ ಅವರಿಗೆ ಎಫ್'ಟಿಐಐ ಅಧ್ಯಕ್ಷ ಸ್ಥಾನವನ್ನು ನೀಡಿದ್ದರು.