ಬಾಲಿವುಡ್

ತನ್ನ 17 ವರ್ಷದ ಮಗಳನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಕಿರುತೆರೆ ನಟಿ!

Vishwanath S

ಮುಂಬೈ: ತನ್ನ 17 ವರ್ಷದ ಮುದ್ದು ಮಗಳನ್ನು ಕೊಂದು ಕಿರುತೆರೆ ನಟಿಯೊಬ್ಬರು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಮನೀಶಾನಗರದಲ್ಲಿ 40 ವರ್ಷದ ಪ್ರದನ್ಯಾ ಪಾರ್ಕರ್ ಆತ್ಮಹತ್ಯೆಗೆ ಶರಣಾಗಿರುವ ಕಿರುತೆರೆ ನಟಿ. ಪ್ರದನ್ಯಾ ಮರಾಠಿ ಧಾರಾವಾಹಿಗಳಲ್ಲಿ ಸಣ್ಣಪುಟ್ಟ ಪಾತ್ರ ಕಾಣಿಸಿಕೊಳ್ಳುತ್ತಿದ್ದರು. 

ಪ್ರದನ್ಯಾ 12ನೇ ತರಗತಿಯಲ್ಲಿ ಓದುತ್ತಿದ್ದ ತಮ್ಮ ಪುತ್ರಿ ಶ್ರುತಿಯನ್ನು ಕೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹಗಳ ಬಳಿ ಡೆತ್ ನೋಟ್ ಸಿಕ್ಕಿದೆ. ಅದರಲ್ಲಿ ನಾನು ನನ್ನ ಮಗಳನ್ನು ಕೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಈ ನಿರ್ಧಾರಕ್ಕೆ ನಾನೇ ಕಾರಣ ಎಂದು ಬರೆದಿದೆ. 

ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೇಲ್ನೋಟಕ್ಕೆ ಪ್ರದನ್ಯಾ ಅವರಿಗೆ ಧಾರಾವಾಹಿಗಳಲ್ಲಿ ಅವಕಾಶ ಸಿಗುತ್ತಿರಲಿಲ್ಲ. ಅಲ್ಲದೆ ಪ್ರದನ್ಯಾ ಅವರ ಗಂಡ ಪ್ರಶಾಂತ್ ಅವರೂ ಬ್ಯುಸಿನೆಸ್ ನಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. 

SCROLL FOR NEXT