ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ವಿಜ್ಞಾನಿಯಾಗಿದ್ದ ವಿದ್ಯಾ ಬಾಲನ್ ಈಗ ಗಣಿತಶಾಸ್ತ್ರಜ್ಞೆ!

ವಿಭಿನ್ನ ಕಥೆಗಳುಳ್ಳ ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸಿ ತಮ್ಮದೇ ಛಾಪನ್ನು ಮೂಡಿಸಿದ ಬಾಲಿವುಡ್ ನಟಿ ವಿದ್ಯಾ ಬಾಲನ್ ಈಗ ಮಾನವ ಕಂಪ್ಯೂಟರ್ ಎಂಬ ಖ್ಯಾತಿಯ ಗಣಿತಶಾಸ್ತ್ರಜ್ಞೆ ಶಕುಂತಲಾ ದೇವಿ

ವಿದ್ಯಾ ಬಾಲನ್
Lingaraj Badiger
Updated On : 25 Aug 2019, 12:14 am

ಮುಂಬೈ: ವಿಭಿನ್ನ ಕಥೆಗಳುಳ್ಳ ಮಹಿಳಾ ಪ್ರಧಾನ ಚಿತ್ರಗಳಲ್ಲಿ ನಟಿಸಿ ತಮ್ಮದೇ ಛಾಪನ್ನು ಮೂಡಿಸಿದ ಬಾಲಿವುಡ್ ನಟಿ ವಿದ್ಯಾ ಬಾಲನ್ ಈಗ ಮಾನವ ಕಂಪ್ಯೂಟರ್ ಎಂಬ ಖ್ಯಾತಿಯ ಗಣಿತಶಾಸ್ತ್ರಜ್ಞೆ ಶಕುಂತಲಾ ದೇವಿ ಅವರ ಜೀವನಾಧಾರಿತ ಚಿತ್ರದಲ್ಲಿ ನಟಿಸಲು ಉತ್ಸುಕರಾಗಿದ್ದಾರೆ.

ವಿದ್ಯಾ ಅಭಿನಯದ 'ಮಿಷನ್ ಮಂಗಲ್' ಚಿತ್ರ ಇತ್ತೀಚೆಗೆ ಬಿಡುಗಡೆಯಾಗಿದ್ದು, ಈ ಚಿತ್ರದಲ್ಲಿ ಇಸ್ರೋ ವಿಜ್ಞಾನಿಯಾಗಿ ಅವರು ಕಾಣಿಸಿಕೊಂಡಿದ್ದರು. ಈಗ ಗಣಿತಶಾಸ್ತ್ರಜ್ಞೆ ಶಕುಂತಲಾ ದೇವಿ ಪಾತ್ರಕ್ಕೆ ಬಣ್ಣ ಹಚ್ಚಲು ಸಿದ್ಧರಾಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ವಿದ್ಯಾ,' ಇಂತಹ ಅದ್ಭುತ ಪಾತ್ರಕ್ಕಾಗಿ ನನ್ನನ್ನು ಆಯ್ಕೆ ಮಾಡಿದ್ದಕ್ಕೆ ತುಂಬಾ ಉತ್ಸುಕಳಾಗಿದ್ದೇನೆ. ಪಾತ್ರಕ್ಕೆ ತಕ್ಕ ನ್ಯಾಯ ಒದಗಿಸಲು ಬಾಬ್ ಕಟ್ ಮಾಡಿಸಿಕೊಳ್ಳುತ್ತಿದ್ದೇನೆ. ಕರ್ಲಿ ಬಾಬ್ ಕೂದಲು ಹಾಗೂ ಸಾಂಪ್ರದಾಯಿಕ ದಕ್ಷಿಣ ಭಾರತದ ಮುಖ ಈ ಪಾತ್ರಕ್ಕೆ ಉತ್ತಮ ಹೊಂದಾಣಿಕೆಯಾಗಿದೆ' ಎಂದು ತಿಳಿಸಿದ್ದಾರೆ.

Advertisement

Advertisement

'ಶಕುಂತಲಾ ದೇವಿ ಅವರ ಆಕರ್ಷಕ ವೈಕ್ತಿತ್ವ ಹಾಗೂ ಅವರ ಜೀವನ ನನ್ನನ್ನು ಹೆಚ್ಚಾಗಿ ಸೆಳೆದಿದೆ. 20 ನೇ ವಯಸ್ಸಿನಿಂದ ಹಿಡಿದು ವೃತ್ತಿಜೀವನದ ಕೊನೆಯವರೆಗಿನ ಅವರ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದೇನೆ' ಎಂದು ನಟಿ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement