ಸಲ್ಮಾನ್ ಖಾನ್ 
ಬಾಲಿವುಡ್

ಹಿಂದಿ ಬಿಗ್ ಬಾಸ್ ನಿಂದ ಹೊರನಡೆದ ಸಲ್ಮಾನ್ ಖಾನ್: ಕಾರ್ಯಕ್ರಮಕ್ಕೆ ಹೊಸ ನಿರೂಪಕಿ!

ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ.

ಹಿಂದಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಹೊಸ ನಿರೂಪಕಿ ಎಂಟ್ರಿ ಕೊಟ್ಟಿದ್ದು, ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ ಶೋಯಿಂದ ಹೊರ ಬಂದಿದ್ದಾರೆ.

ಅನಾರೋಗ್ಯದಿಂದ  ಸಲ್ಮಾನ್ ಖಾನ್ ಬಳಲುತ್ತಿದ್ದು, ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾರೆ ಎಂದು ವರದಿಯಾಗಿದೆ.

ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಸಲ್ಮಾನ್ ಬಿಗ್ ಬಾಸ್ ಕಾರ್ಯಕ್ರಮದಿಂದ ಹೊರ ಬರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಸಲ್ಮಾನ್ ನರವೈಜ್ಞಾನಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದು, ಕೋಪ ಮಾಡಿಕೊಳ್ಳದಂತೆ ವೈದ್ಯರು  ಸಲಹೆ ನೀಡಿದ್ದಾರೆ. ಆದರೆ ಪ್ರತಿವಾರ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಸಲ್ಮಾನ್ ಸ್ಪರ್ಧಿಗಳ ವಿರುದ್ಧ ಕೋಪ ಮಾಡಿಕೊಳ್ಳುತ್ತಾರೆ. ಹಾಗಾಗಿ ಸಲ್ಮಾನ್ ಈ ಕಾರ್ಯಕ್ರಮದಿಂದ ಹೊರ ನಡೆದಿದ್ದಾರೆ ಎನ್ನಲಾಗಿದೆ.

ನಿರ್ದೇಶಕಿ, ನಿರ್ಮಾಪಕಿ ಫರ್ಹಾ ಖಾನ್ ಬಿಗ್ ಬಾಸ್ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. 

ಮುಂದಿನ ವಾರಗಳಲ್ಲಿ ಫರ್ಹಾ ಖಾನ್ ಬಿಗ್‍ಬಾಸ್ ನಿರೂಪಣೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯಕ್ಕೆ ಹಿಂದಿ ಬಿಗ್‍ಬಾಸ್‍ನ 13ನೇ ಆವೃತ್ತಿ ನಡೆಯುತ್ತಿದ್ದು, ಜನವರಿ ತಿಂಗಳಿನಿಂದ ಫರ್ಹಾ ಖಾನ್ ಕಾರ್ಯಕ್ರಮವನ್ನು ನಿರೂಪಣೆ ಮಾಡಲಿದ್ದಾರೆ.

ತಮ್ಮ ಜನ್ಮ ದಿನಾಚರಣೆಯನ್ನು ಬಿಗ್ ಬಾಸ್ ವೇದಿಕೆಯಲ್ಲಿ ಆಚರಿಸಿಕೊಳ್ಳಲು  ಸಲ್ಮಾನ್ ನಿರ್ಧರಿಸಿದ್ದರು, ಆದರೆ ಅನಾರೋಗ್ಯದ ಕಾರಣದಿಂದ ಶೋ ನಿಂದ ಹೊರ ಬಂದಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ