ಬಾಲಿವುಡ್ ನಟ ಅಲೋಕ್ ನಾಥ್ ಗೆ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು ಮಂಜೂರು
ವಿಂತಾ ನಂದಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಲೋಕ್ ನಾಥ್ ಗೆ ಮಹಾರಾಷ್ಟ್ರದ ನ್ಯಾಯಾಲಯವೊಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಮುಂಬೈ: ವಿಂತಾ ನಂದಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅಲೋಕ್ ನಾಥ್ ಗೆ ಮಹಾರಾಷ್ಟ್ರದ ನ್ಯಾಯಾಲಯವೊಂದು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಕಳೆದ ವರ್ಷ ಡಿಸೆಂಬರ್ 14 ರಂದು 62 ವರ್ಷದ ಅಲೋಕ್ ನಾಥ್ , ದಿಂಡೊಸಿ ಸೆಷನ್ಸ್ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
19 ವರ್ಷಗಳ ಹಿಂದೆ ಅಲೋಕ್ ನಾಥ್ ತಮ್ಮ ಅತ್ಯಾಚಾರ ನಡೆಸಿದರು ಎಂದು ಆರೋಪಿಸಿ ವಿಂತಾ ನಂದಾ ನವೆಂಬರ್ 21 ರಂದು ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದರು.
ಈ ದೂರಿನ ಆಧಾರದ ಮೇಲೆ ಪೊಲೀಸರು ಕಥೆಗಾರ, ನಿರ್ಮಾಪಕ ಅಲೋಕ್ ನಾಥ್ ವಿರುದ್ಧ ಐಪಿಸಿ ಸೆಕ್ಷನ್ 376 ಅಡಿಯಲ್ಲಿ ಎಫ್ ಐಆರ್ ದಾಖಲಿಸಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.