ಬಾಲಿವುಡ್

ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ. ನೆರವು ನೀಡಿದ ಬಿಗ್ ಬಿ ಅಮಿತಾಬ್ ಬಚ್ಚನ್

Sumana Upadhyaya
ಮುಂಬೈ: ಬಿಹಾರ ರಾಜ್ಯದ ಎರಡು ಸಾವಿರಕ್ಕೂ ಅಧಿಕ ರೈತರ ಸಾಲವನ್ನು ತೀರಿಸಿದ ನಂತರ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತೊಮ್ಮೆ ಮಾನವೀಯತೆ ಮೆರೆದಿದ್ದಾರೆ. ಜಮ್ಮು-ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಕಳೆದ ಫೆಬ್ರವರಿಯಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 49 ಸಿಆರ್ ಪಿಎಫ್ ಜವಾನರ ಕುಟುಂಬದವರಿಗೆ ತಲಾ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.
ನನ್ನ ಮತ್ತೊಂದು ಭರವಸೆ ಈಡೇರಿದೆ. ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಸ್ವಲ್ಪ ಧನಸಹಾಯ ಮಾಡಬೇಕೆಂದು ಬಯಸಿದ್ದೆ. ಅದು ಈಡೇರಿದೆ, ಸಿಆರ್ ಪಿಎಫ್ ಹುತಾತ್ಮ ಯೋಧರ ಕುಟುಂಬಸ್ಥರ ಹೆಸರು, ವಿಳಾಸ ತಿಳಿದುಕೊಳ್ಳಲು ಸ್ವಲ್ಪ ಸಮಯ ಹಿಡಿಯಿತು, ಆದರೂ ನಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಕ್ಕಿದೆ. ಭಾರತ ಸರ್ಕಾರ ಮತ್ತು ಸಿಆರ್ ಪಿಎಫ್ ಹಿರಿಯ ಅಧಿಕಾರಿಗಳು ಮತ್ತು ಸಂಸ್ಥೆಗಳು ನಮ್ಮ ನೆರವಿಗೆ ಬಂದವು ಎಂದು ಅಮಿತಾಬ್ ಬಚ್ಚನ್ ಅವರು ತಮ್ಮ ಬ್ಲಾಗ್ ನಲ್ಲಿ ಬರೆದುಕೊಂಡಿದ್ದಾರೆ.
ಎರಡು ದಿನಗಳ ಹಿಂದೆ ನಡೆದ ಕಾರ್ಯಕ್ರಮದಲ್ಲಿ ಅಮಿತಾಬ್ ಬಚ್ಚನ್ ತಮ್ಮಮಕ್ಕಳಾದ ಅಭಿಷೇಕ್ ಬಚ್ಚನ್, ಶ್ವೇತಾ ನಂದನ್ ಜೊತೆ ಪುಲ್ವಾಮಾ ದಾಳಿಯ ಹುತಾತ್ಮ ಯೋಧರ ಕುಟುಂಬ ಸದಸ್ಯರಿಗೆ ಧನಸಹಾಯದ ಪತ್ರವನ್ನು ವಿತರಿಸಿದರು.
ಕಳೆದ ವರ್ಷ ಕೂಡ ಬಿಗ್ ಬಿ ಉತ್ತರ ಪ್ರದೇಶದ 1 ಸಾವಿರಕ್ಕೂ ಅಧಿಕ ರೈತರ ಸಾಲವನ್ನು ತೀರಿಸಿದ್ದರು. 
SCROLL FOR NEXT