ಸಲ್ಮಾನ್ ಖಾನ್ 
ಬಾಲಿವುಡ್

ಪತ್ರಕರ್ತನ ಮೇಲೆ ಸಲ್ಮಾನ್ ಖಾನ್ ಹಲ್ಲೆ ಮಾಡಿದ ಆರೋಪ

ಬೈಸಿಕಲ್ ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.

ಮುಂಬೈ: ಬೈಸಿಕಲ್  ಸವಾರಿಗೆ ಅಡ್ಡಿಪಡಿಸಿದ್ದರಿಂದ ತಮ್ಮ ಮೇಲೆ ಹಲ್ಲೆ ನಡೆಸಿರುವ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಹಾಗೂ ಅವರ ಬಾಡಿಗಾರ್ಡ್ ಮೇಲೆ ಎಫ್ ಐಆರ್ ದಾಖಲಿಸುವಂತೆ ಕೋರಿ ವಿದ್ಯುನ್ಮಾನ ಮಾಧ್ಯಮದ ಪತ್ರಕರ್ತರೊಬ್ಬರು ನ್ಯಾಯಾಲಯದಲ್ಲಿ ದೂರು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 323 ( ಮಾನಹಾನಿ ) 392 (ದರೋಡೆ ) ಮತ್ತು 506 ( ಅಪರಾಧದ ಉದ್ದೇಶ) ಅಡಿಯಲ್ಲಿ ಅಂದೇರಿಯ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್  ಆರ್ ಆರ್ ಖಾನ್ ಅವರ ಬಳಿ ಪತ್ರಕರ್ತ ಅಶೋಕ್ ಪಾಂಡೆ ಖಾಸಗಿ ದೂರು ದಾಖಲಿಸಿದ್ದಾರೆ. 
ಏಪ್ರಿಲ್ 24 ರಂದು ಮುಂಜಾನೆ ಈ ಘಟನೆ ನಡೆದಿದೆ .ಪತ್ರಕರ್ತ ಪಾಂಡೆ ಕಾರಿನಲ್ಲಿ ಹೋಗುತ್ತಿರಬೇಕಾದರೆ ಅಂಗರಕ್ಷಕರೊಂದಿಗೆ ಬೈಸಿಕಲ್  ನಲ್ಲಿ ಬರುತ್ತಿದ್ದ ಸಲ್ಮಾನ್ ಖಾನ್ ನೋಡಿದ ತಕ್ಷಣ, ಅಂಗರಕ್ಷಕರ ಒಪ್ಪಿಗೆ ಪಡೆದು ವಿಡಿಯೋ ಮಾಡಿಕೊಳ್ಳಲು ಪ್ರಾರಂಭಿಸಿದ್ದಾರೆ. ಇದರಿಂದ ಕ್ರೋದಗೊಂಡ ಸಲ್ಮಾನ್ ಖಾನ್ ಹಾಗೂ ಅವರ ಅಂಗರಕ್ಷಕರು ತಮ್ಮ ಕಾರಿನ ಬಳಿ ಬಂದು ಹಲ್ಲೆ ನಡೆಸಿದ್ದಾರೆ ಎಂದು ಪಾಂಡೆ ಆರೋಪಿಸಿದ್ದಾರೆ.
ಸಲ್ಮಾನ್ ಖಾನ್ ತಮ್ಮ ಮೇಲೆ ಹಲ್ಲೆ ನಡೆಸಿದಲ್ಲದೇ ತಮ್ಮ ಬಳಿಯಿದ್ದ ಮೊಬೈಲ್  ಪೋನ್  ಕಿತ್ತುಕೊಂಡು ಹೋಗಿದ್ದಾರೆ. ಮೂವರು ಸೇರಿ ಮನಬಂದಂತೆ ಹಲ್ಲೆ ನಡೆಸಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.
ಸಲ್ಮಾನ್ ಖಾನ್ ಯಾವುದೇ ಅಪರಾಧ ಮಾಡಿಲ್ಲ ಎಂದು ಹೇಳಿ ಪೊಲೀಸರು ದೂರು ದಾಖಲಿಸಿಕೊಳ್ಳಲು ಹಿಂಜರಿದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ದೂರು ಸಲ್ಲಿಸಿರುವುದಾಗಿ ಪಾಂಡೆ ತಿಳಿಸಿದ್ದಾರೆ.ಸಲ್ಮಾನ್ ಖಾನ್ ವಿರುದ್ಧ ಎಫ್ ಐಆರ್ ಹಾಗೂ ತನಿಖೆಗೆ ದೂರುದಾರರು ಕೋರಿದ್ದು, ಜುಲೈ 12 ರಂದು ವಿಚಾರಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

SCROLL FOR NEXT