ವೀರೂ ದೇವಗನ್, ಅಜಯ್ ದೇವಗನ್ 
ಬಾಲಿವುಡ್

ಅಜಯ್ ದೇವಗನ್ ತಂದೆ ಸಾಹಸ ನಿರ್ದೇಶಕ ವೀರೂ ದೇವಗನ್ ನಿಧನ

ಬಾಲಿವುಡ್ ನಟ ಅಜಯ್ ದೇವಗನ್ ಅವರ ತಂದೆ ಹಾಗೂ ನಿರ್ದೇಶಕ ವೀರೂ ದೇವಗನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಮುಂಬೈ: ಬಾಲಿವುಡ್ ನಟ ಅಜಯ್ ದೇವಗನ್ ಅವರ ತಂದೆ ಹಾಗೂ ನಿರ್ದೇಶಕ ವೀರೂ ದೇವಗನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ ಅವರು  ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.  ಸಂಜೆ 6 ಘಂಟೆ ಸುಮಾರಿನಲ್ಲಿ ವಿಲೇ ಪಾರ್ಲ್ ಘಾಟ್ ನಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿತು ಎಂದು ಕುಟುಂಬ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

ವೀರೂ ದೇವಗನ್, ಸುಮಾರು 80ಕ್ಕೂ ಅಧಿಕ ಚಿತ್ರಗಳಿಗೆ ನಿರ್ದೇಶನ ಮಾಡಿದ್ದಾರೆ. ನಟ ಅಮಿತಾಬ್ ಬಚ್ಚನ್ ಹಾಗೂ ಅಜಯ್ ದೇವಗನ್ ಅಭಿನಯದ 'ಹಿಂದೂಸ್ತಾನ ಕೀ ಕಸಮ್' ಚಿತ್ರವನ್ನು ಕೂಡ ನಿರ್ದೇಶಿಸಿದ್ದು ಅವರೇ. ಅಲ್ಲದೇ, 'ಕ್ರಾಂತಿ', 'ಸೌರಭ್' ಹಾಗೂ 'ಸಿಂಹಾಸನ್' ಚಿತ್ರಗಳ ಸಣ್ಣ ಪಾತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

Operation Sindoorಗೆ ಪಾಕಿಸ್ತಾನ ತಿರುಗೇಟು; ಭಾರತದ 2 ವಾಯುನೆಲೆ ಧ್ವಂಸ ಅಂತೆ..! ಆದ್ರೆ ಅದು ಅಸ್ತಿತ್ವದಲ್ಲೇ ಇಲ್ಲ..!

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

SCROLL FOR NEXT