ಬಾಲಿವುಡ್

ಆಸ್ಪತ್ರೆಯಿಂದ ಮನೆಗೆ ಬಿಗ್ ಬಿ ಅಮಿತಾಬ್ ಬಚ್ಚನ್

Srinivasamurthy VN

ಮುಂಬೈ: ಬಾಲಿವುಡ್ ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ (77) ಶುಕ್ರವಾರ ರಾತ್ರಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಅವರೊಂದಿಗೆ ಪತ್ನಿ ಜಯಾ ಬಚ್ಚನ್ ಮತ್ತು ಪುತ್ರ ಅಭಿಷೇಕ್ ಬಚ್ಚನ್ ಇದ್ದರು. ಸಾಮಾನ್ಯ ಆರೋಗ್ಯ ತಪಾಸಣೆಯ ಭಾಗವಾಗಿ ನಾಲ್ಕು ದಿನಗಳ ಹಿಂದೆ ಅವರು ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. 

ಯಕೃತ್‌ಗೆ ಸಂಬಂಧಿಸಿದ ಸಮಸ್ಯೆಯಿಂದ ಬಳಲುತ್ತಿರುವ ಬಚ್ಚನ್, ಚಿಕಿತ್ಸೆಗಾಗಿ ತಪ್ಪದೆ ನಿಯಮಿತವಾಗಿ ವೈದ್ಯರನ್ನು ಭೇಟಿಯಾಗುತ್ತಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಸಕ್ರಿಯವಾಗಿರುವ ಬಿಗ್‌ಬಿ ಆಸ್ಪತ್ರೆಯಲ್ಲಿದ್ದಾಗಲೂ, ಸತತ ಟ್ವೀಟ್ ಮಾಡುವ ಮೂಲಕ ಅಭಿಮಾನಿಗಳನ್ನು ಅಭಿನಂದಿಸಿದರು.
 

SCROLL FOR NEXT