ತಾಯಿ ಜತೆ ಇರ್ಫಾನ್ ಖಾನ್ 
ಬಾಲಿವುಡ್

ಬಾಲಿವುಡ್ ನಟ ಇರ್ಫಾನ್ ಖಾನ್ ತಾಯಿ ನಿಧನ, ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ

ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ(95) ಅವರು ಶನಿವಾರ ಜೈಪುರದಲ್ಲಿ ನಿಧನರಾಗಿದ್ದಾರೆ. ಆದರೆ ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿರುವ ಪುತ್ರ ಇರ್ಫಾನ್ ಖಾನ್ ಅವರು ತಾಯಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಆಗದೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದಾರೆ.

ಜೈಪುರ್: ಬಾಲಿವುಡ್ ಖ್ಯಾತ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ(95) ಅವರು ಶನಿವಾರ ಜೈಪುರದಲ್ಲಿ ನಿಧನರಾಗಿದ್ದಾರೆ. ಆದರೆ ಲಾಕ್ ಡೌನ್ ನಿಂದಾಗಿ ಮುಂಬೈನಲ್ಲಿರುವ ಪುತ್ರ ಇರ್ಫಾನ್ ಖಾನ್ ಅವರು ತಾಯಿಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಆಗದೆ ವಿಡಿಯೋ ಕಾನ್ಫೆರೆನ್ಸ್ ಮೂಲಕ ಅಂತಿಮ ದರ್ಶನ ಪಡೆದಿದ್ದಾರೆ.

ಇರ್ಫಾನ್ ತಾಯಿ ಸಯೀದಾ ಬೇಗಂ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ. ಅವರು ಜೈಪುರದ ಬೆನಿವಾಲ್ ಕಾಂತ ಕೃಷ್ಣ ಕಾಲೋನಿಯಲ್ಲಿ ವಾಸವಾಗಿದ್ದರು.

ನಟ ಇರ್ಫಾನ್ ಅವರು ಮುಂಬೈನಲ್ಲಿದ್ದು, ಕೊರೋನಾ ಲಾಕ್‍ಡೌನ್ ಪರಿಣಾಮದಿಂದಾಗಿ ಅವರು ಜೈಪುರಕ್ಕೆ ಬರಲು ಸಾಧ್ಯವಾಗಿಲ್ಲ. ಆದ್ದರಿಂದ ಕೊನೆಯ ಬಾರಿಗೆ ತಾಯಿ ಅಂತಿಮ ದರ್ಶನವೂ ಸಿಗಲಿಲ್ಲ. ಆದರೆ ಇರ್ಫಾನ್ ವಿಡಿಯೋ  ಮೂಲಕ ತಾಯಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.

ಇರ್ಫಾನ್ ತಾಯಿ ಸಯೀದಾ ಬೇಗಂ ಅಂತ್ಯಕ್ರಿಯೆ ಶನಿವಾರ ಸಂಜೆ ನಡೆದಿದೆ. ಲಾಕ್‍ಡೌನ್‍ನಿಂದಾಗಿ ಕೆಲವರು ಮಾತ್ರ ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video