ಇರ್ಫಾನ್ ಖಾನ್ 
ಬಾಲಿವುಡ್

ಬಾಲಿವುಡ್ ನಟ ಇರ್ಫಾನ್ ಖಾನ್ ಇನ್ನಿಲ್ಲ: ಕೇಜ್ರಿವಾಲ್ ಸೇರಿದಂತೆ ಗಣ್ಯರ ಸಂತಾಪ

ಟ್ಯೂಮರ್ ನಿಂದಾಗಿ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನ ಧೀರುಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 

ಮುಂಬಯಿ: ಟ್ಯೂಮರ್ ನಿಂದಾಗಿ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್ ಮುಂಬೈನ ಧೀರುಬಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. 

ಕಳೆದ ವಾರವಷ್ಟೇ ಅವರ ತಾಯಿ ನಿಧನರಾಗಿದ್ದರು. ಲಾಕ್ ಡೌನ್ ನಿಂದಾಗಿ ತಮ್ಮ ತಾಯಿಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿರಲಿಲ್ಲ. ಈ ಬಳಿಕ ಅನಾರೋಗ್ಯದಿಂದಾಗಿ ತಾವು ಕೂಡ ಮುಂಬೈನ ಕೋಕಿಲಾಬೆನ್ ಧೀರುಬಾಯಿ ಅಂಬಾನಿ ಆಸ್ಪತ್ರೆಗೆ ಕಳೆದ ಎರಡು ದಿನಗಳ ಹಿಂದೆ ದಾಖಲಾಗಿದ್ದರು. 

54 ವರ್ಷದ ಇರ್ಫಾನ್ ಖಾನ್ ಕಳೆದ ಕೆಲ ವರ್ಷಗಳಿಂದ ನ್ಯೂರೋಎಂಡೋಕ್ರೈನ್ ಟ್ಯೂಮರ್ ಸಮಸ್ಯೆಯಿಂದ ಬಳಲುತ್ತಿದ್ದರು. ಅವರು 2018 ರಲ್ಲಿ ಲಂಡನ್ ನಲ್ಲಿ ಟ್ಯೂಮರ್ ಗೆ ಚಿಕಿತ್ಸೆ ಪಡೆದಿದ್ದರು. ಇರ್ಫಾನ್ ಖಾನ್ ಆರೋಗ್ಯ ಗಂಭೀರವಾದ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಟನನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಅವರು ಇತ್ತೀಚೆಗಷ್ಟೇ ಅಂಗ್ರೇಜಿ ಮೀಡಿಯಾಂ ಸಿನಿಮಾದಲ್ಲಿ ನಟಿಸಿದ್ದರು. 

ನನ್ನ ಆತ್ಮೀಯ ಮಿತ್ರ ಇರ್ಫಾನ್ ಖಾನ್ ವಿಧಿವಶರಾಗಿದ್ದು ಈ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ನೀಡಲಿ ಎಂದು ಶೂಜಿತ್ ಸರ್ಕಾರ್ ಟ್ವೀಟ್ ಮಾಡಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇರ್ಫಾನ್ ಖಾನ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನ ನಮಗೆ ಆಘಾತವನ್ನುಂಟು ಮಾಡಿದೆ, ಅವರ ಆತ್ಮಕ್ಕೆ ಶಾಂತಿ ದೊರಕಲಿ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!

'Chhatron Ki Goonj' ಕಾರ್ಯಕ್ರಮದ ವೇಳೆ Rahul Gandhi ಮಾಡಿದ 29 ತಪ್ಪುಗಳ ದಾಖಲೆ ನೀಡಿದ ಜೂಟ್ ಕಿ ಗೂಂಜ್ ವೆಬ್​ಸೈಟ್!

ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕಾರ್ಯಕ್ರಮಕ್ಕೆ ವಿರೋಧ: ಮೇಯರ್ ಮಮ್ದಾನಿ ವಿರುದ್ಧ ಅಮೆರಿಕದ ಖ್ಯಾತ ಗಾಯಕಿ ಕಿಡಿ!