ಬಾಲಿವುಡ್ ನಟ ರಿಷಿ ಕಪೂರ್ 
ಬಾಲಿವುಡ್

ಮುಂಬೈ: ಚಂದನ್ ವಾಡಿ ಸ್ಮಶಾನದಲ್ಲಿ ರಿಷಿ ಕಪೂರ್ ಅಂತ್ಯಕ್ರಿಯೆ; ಕುಟುಂಬಸ್ಥರು, ಸ್ನೇಹಿತರಿಂದ ಮೌನ ವಿದಾಯ

 ಲಾಕ್ ಡೌನ್ ಮಧ್ಯೆ ಬಾಲಿವುಡ್ ನಟ ರಿಷಿ ಕಪೂರ್ ಅಂತ್ಯಕ್ರಿಯೆ ದಕ್ಷಿಣ  ಮುಂಬೈನ ಚಂದನ್ ವಾಡಿ ಸ್ಮಶಾನದಲ್ಲಿ ನಡೆಯಿತು.  ರಿಷಿ ಕಪೂರ್ ಅವರ ಮಗ ರಣಬೀರ್ ಕಪೂರ್, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಮುಂಬೈ:  ಲಾಕ್ ಡೌನ್ ಮಧ್ಯೆ ಬಾಲಿವುಡ್  ಹಿರಿಯ ನಟ ರಿಷಿ ಕಪೂರ್ ಅಂತ್ಯಕ್ರಿಯೆ ದಕ್ಷಿಣ  ಮುಂಬೈನ ಚಂದನ್ ವಾಡಿ ಸ್ಮಶಾನದಲ್ಲಿ ನಡೆಯಿತು.  ರಿಷಿ ಕಪೂರ್ ಅವರ ಮಗ ರಣಬೀರ್ ಕಪೂರ್, ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು. 

ರಿಷಿ ಕಪೂರ್ ಪತ್ನಿ ನೀತೂ ಸಿಂಗ್ ಕಪೂರ್, ಪುತ್ರ ರಣಬೀರ್ ಕಪೂರ್, ಸಹೋದರ ರಣಧೀರ್ ಕಪೂರ್, ಕರಿನಾ ಕಪೂರ್, ಸೈಫ್ ಅಲಿಖಾನ್, ಅನಿಲ್ ಅಂಬಾನಿ, ಅಯಾನ್ ಮುಖರ್ಜಿ, ಅಲಿಯಾ ಭಟ್, ಅಭಿಷೇಕ್ ಬಚ್ಚನ್ ಮತ್ತಿತರ ಗಣ್ಯರು ಅಂತಿಮ ನಮನ ಸಲ್ಲಿಸಿದರು.

ಮುಂಬೈ ಪೊಲೀಸರು ಮೊದಲು ರಿಷಿ ಕಪೂರ್ ಪಾರ್ಥಿವ ಶರೀರವನ್ನು ನೇರವಾಗಿ ಚಿತಾಗಾರಕ್ಕೆ ಸಾಗಿಸುವಂತೆ ಸಲಹೆ ನೀಡಿದರು. ಆದರೆ, ಕುಟುಂಬ ಸದಸ್ಯರು ರಿಷಿ ನಿವಾಸಕ್ಕೆ ಕೊಂಡೊಯ್ದ ನಂತರವೇ ಪಾರ್ಥಿವ ಶರೀರವನ್ನು ಸ್ಮಶಾನಕ್ಕೆ ಸಾಗಿಸಿದರು.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಾಲಿವುಡ್ ಚಿತ್ರರಂಗದ ಮೇರು ತಾರೆ ರಿಷಿ ಕಪೂರ್  ಹೆಚ್ ಎನ್ ರಿಯಲನ್ಸ್ ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಯೋತ್ಪಾದಕ ದಾಳಿ ವಿಫಲಗೊಳಿಸಿದ ಭಾರತೀಯ ಪೈಲಟ್‌ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್‌ಗೆ ಆಹ್ವಾನ..!

4 IAS ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ; ಯಾರಿಗೆಲ್ಲಾ ಬದಲಾವಣೆ

ಆಧಾರ ರಹಿತ ಆರೋಪ ಸರಿಯಲ್ಲ, ‘ದಾಖಲೆ ತೋರಿಸಿ, ಜಮೀನನ್ನೇ ನಿಮ್ಮ ಕುಟುಂಬಕ್ಕೆ ಕೊಡ್ತೀನಿ; HDK NICE ಆರೋಪಕ್ಕೆ ಸಚಿವ ಬಾಲಕೃಷ್ಣ ತಿರುಗೇಟು

SIR ಅಕ್ರಮಗಳ ಕುರಿತು ರಾಜ್ಯದಿಂದ ಪ್ರತ್ಯೇಕ ತನಿಖೆ ಇಲ್ಲ: CM ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆ