ಸುಶಾಂತ್ ಸಿಂಗ್ 
ಬಾಲಿವುಡ್

ಆತ್ಮಹತ್ಯೆಗೂ ಮುನ್ನ ಮೂರು ವಿಷಯಗಳ ಬಗ್ಗೆ ಗೂಗಲ್ ಸರ್ಚ್ ಮಾಡಿದ್ದ ನಟ ಸುಶಾಂತ್ ಸಿಂಗ್!

ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಮುಂಬಯಿ: ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡ ನಟ ಸುಶಾಂತ್ ಸಿಂಗ್ ರಜಪೂತ್‌ ಸಾವಿಗೂ ಮೊದಲು ಮೂರು ವಿಷಯಗಳನ್ನು ಗೂಗಲ್‌ನಲ್ಲಿ ಹುಡುಕಿದ್ದಾರೆ ಎಂದು ಮುಂಬೈ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ರಕಾರ ಅವರು ಕೆಲವು ಸಾಮಾನ್ಯ ಸುದ್ದಿಗಳನ್ನು ಹುಡುಕಿದ್ದಾರೆ,  ತಮ್ಮ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಹೆಸರು ಹುಡುಕಿದ್ದಾರೆ ಅಷ್ಟೇ ಅಲ್ಲದೆ ಮಾನಸಿಕ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಲೇಖನಗಳನ್ನು ಹುಡುಕಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಶಾಂತ್ ಆತ್ಮಹತ್ಯೆ ಮಾಡಿಕೊಂಡ ಕೆಲ ಗಂಟೆಗಳ ಮೊದಲು ತನ್ನ ಹೆಸರನ್ನೂ ಗೂಗಲ್‌ನಲ್ಲಿ ಹುಡುಕಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಅವರ ಲ್ಯಾಪ್‌ಟಾಪ್ ಹಾಗೂ ಮೊಬೈಲ್‌ನ ವಿಧಿವಿಜ್ಞಾನ ತನಿಖೆಯಿಂದ ಈ ಮಾಹಿತಿ ತಿಳಿದುಬಂದಿದೆ. 

ಅವರ ಬ್ಯಾಂಕ್ ಖಾತೆಯ ಪರಿಶೀಲನೆಯ ಪ್ರಕಾರ 2.8 ಕೋಟಿ ಹಣವನ್ನು ಜಿಎಸ್‌ಟಿ ಮೂಲಕ ವರ್ಗಾವಣೆ ಮಾಡಲಾಗಿತ್ತು. ಸಿನಿಮಾ ಕ್ಷೇತ್ರದ 40 ಮಂದಿಯ ಹೇಳಿಕೆಗಳನ್ನು ಈ ಪ್ರಕರಣದಲ್ಲಿ ದಾಖಲಿಸಲಾಗಿದೆ.

ಮಾಜಿ ಮ್ಯಾನೇಜರ್ ದಿಶಾ ಸಾವಿನೊಂದಿಗೆ ಸುಶಾಂತ್ ಹೆಸರನ್ನು ತಳಕು ಹಾಕಲಾಗಿತ್ತು. ಆ ಕಾರಣಕ್ಕೆ ಸುಶಾಂತ್ ಮನನೊಂದಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?