ಉಸಿರಾಟ ಸಮಸ್ಯೆ: ಬಾಲಿವುಡ್ ನಟ ಸಂಜಯ್ ದತ್ ಆಸ್ಪತ್ರೆಗೆ ದಾಖಲು
ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಪ್ರಸ್ತುತ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ
ಬಾಲಿವುಡ್ ನಟ ಸಂಜಯ್ ದತ್ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಟ ಪ್ರಸ್ತುತ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕಡ್ಡಾಯ ಪ್ರೋಟೋಕಾಲ್ ನಂತೆ ನಟ ಸಂಜಯ್ ದತ್ ಅವರಿಗೆ ಕೋವಿಡ್ -19 ಪರೀಕ್ಷೆ ನಡೆಸಲಾಗಿದ್ದು ಅವರ ವರದಿಗಳು ನೆಗೆಟಿವ್ ಬಂದಿದೆ,
ನಟ ಸಂಜಯ್ ದತ್ ಅವರ ಕೋವಿಡ್ ವರದಿ ನೆಗೆಟಿವ್ ಬಂದಿದ್ದು ಆದರೆ ವೈದ್ಯಕೀಯ ಪರೀಕ್ಷೆಯ ಕಾರಣ ಇನ್ನೂ ಸ್ವಲ್ಪ ಸಮಯದವರೆಗೆ ಅವರು ಆಸ್ಪತ್ರೆಯಲ್ಲೇ ಇರಲಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯಲ್ಲಿ ನಟನಿಗೆ ಚಿಕಿತ್ಸೆ ನೀಡಿದ್ದ ವೈದ್ಯರು ಹೇಳಿದ್ದಾರೆ.
ಮುನ್ನಾ ಭಾಯ್ ಎಂಬಿಬಿಎಸ್ ಖ್ಯಾತಿಯ ನಟ ಕನ್ನಡದಲ್ಲಿ ಬಹುನಿರೀಕ್ಷಿತ ಚಿತ್ರ "ಕೆಜಿಎಫ್-2" ನಲ್ಲಿ ಅಧೀರನ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಇಂದು ಮುಂಜಾನೆ ಖ್ಯಾತ ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಕೊರೋನಾ ನೆಗೆಟಿವ್ ವರದಿ ಪಡೆದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.