ಬಾಲಿವುಡ್ ನಟ ಸೋನು ಸೂದ್ 
ಬಾಲಿವುಡ್

ನೀಟ್, ಜೆಇಇ ಪರೀಕ್ಷೆ ಆತಂಕ ಬೇಡ: ನಾನು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇನೆ- ನಟ ಸೋನು ಸೂದ್ 

 ಪ್ರಸಕ್ತ  ಸಾಲಿನ ನೀಟ್ ಮತ್ತು ಜೆಇಇ  ಮುಖ್ಯ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ನೆರವಿಗೆ ಧಾವಿಸುವುದಾಗಿ ಬಾಲಿವುಡ್ ನಟ ಸೋನು ಸೂದ್ ಹೇಳಿದ್ದಾರೆ.

ಮುಂಬೈ:  ಕೋವಿಡ್-19 ಸಂಕಷ್ಟದ ಸಮಯದಲ್ಲಿ  ಪ್ರಸಕ್ತ  ಸಾಲಿನ ನೀಟ್ ಮತ್ತು ಜೆಇಇ  ಮುಖ್ಯ ಪರೀಕ್ಷೆಯನ್ನು ಮುಂದೂಡಬೇಕೆಂದು ವಿದ್ಯಾರ್ಥಿಗಳು, ಪೋಷಕರು, ಸೆಲೆಬ್ರಿಟಿಗಳು, ಹೋರಾಟಗಾರರು ಮತ್ತು ರಾಜಕೀಯ ಮುಖಂಡರುಗಳು ಒತ್ತಾಯಿಸುತ್ತಿದ್ದಾರೆ. ಆದಾಗ್ಯೂ, ನಿಗದಿತ ವೇಳೆಯಲ್ಲಿಯೇ ಪರೀಕ್ಷೆ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ಸ್ಪಷ್ಟಪಡಿಸಿದೆ.

ಕೋವಿಡ್-19 ಪರಿಸ್ಥಿತಿಯಲ್ಲಿ ದೇಶದಲ್ಲಿನ ಅನೇಕ ರಾಜ್ಯಗಳಲ್ಲಿ ಸಾರ್ವಜನಿಕ ಸಾರಿಗೆ ಇನ್ನೂ ಸರಿಯಾಗಿ ಪುನರ್ ಆರಂಭವಾಗಿಲ್ಲ. ಆದ್ದರಿಂದ ವಿದ್ಯಾರ್ಥಿಗಳಿಗೆ ಖಾಸಗಿ ಸಾರಿಗೆ ವ್ಯವಸ್ಥೆ ಮಾಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಬಾಲಿವುಡ್ ನಟ ಸೋನು ಸೂದ್, ವಿದ್ಯಾರ್ಥಿಗಳ ನೆರವಿಗೆ ಧಾವಿಸುವುದಾಗಿ ಟ್ವೀಟ್ ಮಾಡಿದ್ದಾರೆ.

''ಒಂದು ವೇಳೆ ಜೆಇಇ ಮತ್ತು ನೀಟ್ ಪರೀಕ್ಷೆಗಳು ಮೂಂದೂಡಿಕೆ ಆಗದಿದ್ದಲ್ಲಿ, ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ತೆರಳಲು ನೆರವು ನೀಡುವುದಾಗಿ ಅವರು ಹೇಳಿದ್ದಾರೆ. ನಾನು ನಿಮ್ಮ ಬೆಂಬಲಕ್ಕೆ ನಿಲ್ಲುತ್ತೇನೆ. ಒಂದು ವೇಳೆ ನೀವು ಏಲ್ಲಿಯಾದರೂ ಸಿಕ್ಕಿ ಹಾಕಿಕೊಂಡಲ್ಲಿ  ನಿಮ್ಮ ಪ್ರಯಾಣದ ಪ್ರದೇಶಗಳನ್ನು ನನಗೆ ತಿಳಿಸಿ, ಪರೀಕ್ಷಾ ಕೇಂದ್ರಗಳನ್ನು ತಲುಪಲು ನಾನು ನಿಮಗೆ ಸಹಾಯ ಮಾಡುತ್ತೇನೆ' ಎಂದು ಸೋನು ಸೂದ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ನೇಪಾಳ ಭೀಕರ ಪ್ರವಾಹಕ್ಕೆ ಚೀನಾದ ನಿರ್ಮಾಣ ಕಾರ್ಯವೇ ಕಾರಣ?

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!