ರಣವೀರ್ ಸಿಂಗ್ ಹಾಗೂ ದೀಪಿಕಾ 
ಬಾಲಿವುಡ್

'83' ಫಸ್ಟ್ ಲುಕ್ ಅನಾವರಣ, ದೀಪಿಕಾ ಬಾಬ್ ಕಟ್ ಗೆ ಫ್ಯಾನ್ಸ್ ಫಿದಾ

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಜೀವನಾಧಾರಿತ ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ '83'ರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಕಪಿಲ್ ದೇವ್ ಪತ್ನಿ ರೋಮಿ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಪಡುಕೋಣೆ ಅವರ ಬಾಬ್ ಕಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಟೀಂ ಇಂಡಿಯಾ ಮಾಜಿ ನಾಯಕ ಕಪಿಲ್ ದೇವ್ ಜೀವನಾಧಾರಿತ ಬಾಲಿವುಡ್‌ನ ಬಹುನಿರೀಕ್ಷಿತ ಸಿನಿಮಾ '83'ರ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಕಪಿಲ್ ದೇವ್ ಪತ್ನಿ ರೋಮಿ ದೇವ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ದೀಪಿಕಾ ಪಡುಕೋಣೆ ಅವರ ಬಾಬ್ ಕಟ್ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.

ಚಿತ್ರದ ಫಸ್ಟ್ ಲುಕ್ ಅನ್ನು ಟ್ವೀಟರ್ ನಲ್ಲಿ ಶೇರ್ ಮಾಡಿರುವ ದೀಪಿಕಾ, 'ಕ್ರೀಡಾ ಇತಿಹಾಸದಲ್ಲಿ ಅತ್ಯಂತ ಅಪ್ರತಿಮ ಕ್ಷಣಗಳನ್ನು ಸೆರೆ ಹಿಡಿಯುವ ಚಲನಚಿತ್ರದಲ್ಲಿ ಒಂದು ಸಣ್ಣ ಪಾತ್ರದಲ್ಲಿ ಅಭಿನಯಸಲು ಅವಕಾಶ ಸಿಕ್ಕಿದ್ದೆ ಒಂದು ಗೌರವ. ಪತಿಯ ವೃತ್ತಿ ಜೀವನ ಮತ್ತು ವೈಯಕ್ತಿಕ ಆಕಾಂಕ್ಷೆಗಳ ಯಶಸ್ಸಿನಲ್ಲಿ ಹೆಂಡತಿ ವಹಿಸುವ ಪಾತ್ರವನ್ನು ನನ್ನ ತಾಯಿಯಲ್ಲೇ ನಾನು ಬಹಳ ಹತ್ತಿರದಿಂದ ನೋಡಿದ್ದೇನೆ. ‘83‘ ಸಿನಿಮಾವು ನನಗೆ ಹಲವಾರು ವಿಧಗಳಲ್ಲಿ ತನಗಿಂತಲೂ ತನ್ನ ಗಂಡನ ಕನಸನ್ನು ಸಾಕಾರಗೊಳಿಸುವ ಪ್ರತಿ ಮಹಿಳೆಯರ ಕಾವ್ಯದಂತೆ ಕಾಣಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

ಫಸ್ಟ್ ಲುಕ್  ನಲ್ಲಿ ಕಪಿಲ್ ದೇವ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರಣವೀರ್ ಸಿಂಗ್ ಹಾಗೂ ದೀಪಿಕಾ ಪರಸ್ಪರ ಒಬ್ಬರನ್ನೊಬ್ಬರು ನೋಡಿಕೊಳ್ಳುತ್ತಿರುವ ಫೋಟೋ ಗಮನಸೆಳೆಯುತ್ತದೆ. ರಣವೀರ್ ರಿಲ್ಯಾಕ್ಸ್ ಮೂಡ್‌ನಲ್ಲಿ ಕಾಣಿಸಿಕೊಂಡಿದ್ದರೆ, ದೀಪಿಕಾ ಮುಖದಲ್ಲಿನ ನಗು ಆಕರ್ಷಕವಾಗಿದೆ. ಇದಿಷ್ಟೇ ಅಲ್ಲದೆ ಬಾಬ್ ಕಟ್ ಗೆಟಪ್ ವಿಶೇಷ ಎನ್ನಬಹುದು. ರಣವೀರ್ ಟೀಂ ಇಂಡಿಯಾ ಬ್ಲೇಜರ್‌ ಧರಿಸಿದ್ದರೆ ದೀಪಿಕಾ ಕಪ್ಪು ಮತ್ತು ಕೆನೆ ಮಿಶ್ರಿತ ಬಣ್ಣದ ದಿರಿಸಿನಲ್ಲಿ ಕಂಗೊಳಿಸಿದ್ದಾರೆ.

ಕಬೀರ್ ಖಾನ್ ನಿರ್ದೇಶನದ '83' ಕಪಿಲ್ ದೇವ್ ನಾಯಕತ್ವದ ಭಾರತದ ಕ್ರಿಕೆಟ್ ತಂಡ 1983ರಲ್ಲಿ ವಿಶ್ವಕಪ್ ಗೆದ್ದ ರೋಚಕ ಕಥಾನಕವನ್ನು ಈ ಸಿನಿಮಾ ಮೂಲಕ ತೆರೆಗೆ ತರಲಾಗುತ್ತಿದೆ.

ಸರಣಿಯ ಫೇವರಿಟ್ ತಂಡ ಎನ್ನಿಸಿಕೊಂಡಿದ್ದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ ಭಾರತ ವಿಶ್ವಕಪ್ ಮುಡಿಗೇರಿಸಿಕೊಂಡ ಐತಿಹಾಸಿಕ ಕ್ಷಣಗಳು ಹೇಗಿತ್ತು ಎಂಬುದನ್ನು ತೆರೆಯ ಮೇಲೆ ನೋಡಲು ಚಿತ್ರರಸಿಕರು ತುದಿಗಾಲಲ್ಲಿ ನಿಲ್ಲುವಂತೆ ಮಾಡಿದೆ ಈ ಸಿನಿಮಾ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT