ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್, ಪುತ್ರಿ ಆರಾಧ್ಯಾಗೂ ಕೊರೋನಾ ಪಾಸಿಟಿವ್
ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.
ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಸೊಸೆ, ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾದ್ಯಾ ಬಚ್ಚನ್ ಅವರಿಗೂ ಕೊರೋನಾ ವಕ್ಕರಿಸಿದೆ.
ಅಮಿತಾಬ್ ಬಚ್ಚನ್ ಮತ್ತು ಅವರ ಪುತ್ರ ಅಭಿಷೇಕ್ ಬಚ್ಚನ್ ಅವರಿಗೆ ಈಗಾಗಲೇ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಅವರನ್ನು ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪತಿ ಹಾಗೂ ಮಾವನಿಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಐಶ್ವರ್ಯ, ಪುತ್ರಿ ಆರಾಧ್ಯಾ ಹಾಗೂ ಅತ್ತೆ ಜಯಾ ಬಚ್ಚನ್ ಅವರಿಗೂ ಕೊರೋನಾ ಪರೀಕ್ಷೆ ನಡೆಸಲಾಗಿತ್ತು. ಇದೀಗ ಮೂವರ ವರದಿ ಬಂದಿದ್ದು, ಐಶ್ವರ್ಯಾ ಹಾಗೂ ಆರಾಧ್ಯಾಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಜಯಾ ಬಚ್ಚನ್ ಅವರಿಗೆ ನೆಗಟಿವ್ ಬಂದಿದೆ.
ಈ ನಡುವೆ ಅಮಿತಾಭ್ ಬಚ್ಚನ್ ಅವರ ಆರೋಗ್ಯ ಸ್ಥಿರವಾಗಿದೆ. ಸೌಮ್ಯ ಲಕ್ಷಣಗಳಷ್ಟೇ ಕಂಡು ಬಂದಿದೆ. ಪ್ರಸ್ತುತ ಆಸ್ಪತ್ರೆಯ ಐಸೋಲೇಷನ್ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಶನಿವಾರ ರಾತ್ರಿ 10.30ರ ವೇಳೆ ಸ್ವತಃ ಅಮಿತಾಭ್ ಅವರೇ ತಮಗೆ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ಟ್ವೀಟ್ ಮಾಡಿ ತಿಳಿಸಿದ್ದರು. ಇದಾಗಿ ಕೆಲ ಸಮಯದ ನಂತರ ಅವರ ಪುತ್ರರಾದ ಅಭಿಷೇಕ್ ಬಚ್ಚನ್ ಸಹ ಕೊರೋನಾ ಪಾಸಿಟಿವ್ ಇರುವುದಾಗಿ ಟ್ವೀಟ್ ಮಾಡಿದ್ದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.