ಸಾರಾ ಅಲಿಖಾನ್ 
ಬಾಲಿವುಡ್

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಕಾರು ಚಾಲಕನಿಗೆ ಕೊರೋನಾ ಸೋಂಕು

ಬಾಲಿವುಡ್‌ ನಟಿ ಸಾರಾ ಅಲಿ ಖಾನ್‌ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರಾ ಮತ್ತು ಅವರ ಕುಟುಂಬ ಸದಸ್ಯರು ಕೋವಿಡ್‌–19 ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ.

ಬಾಲಿವುಡ್‌ ನಟಿ ಸಾರಾ ಅಲಿ ಖಾನ್‌ ಅವರ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಾರಾ ಮತ್ತು ಅವರ ಕುಟುಂಬ ಸದಸ್ಯರು ಕೋವಿಡ್‌–19 ಪರೀಕ್ಷೆ ಮಾಡಿಸಿಕೊಂಡಿದ್ದು ಎಲ್ಲರೂ ಸುರಕ್ಷಿತವಾಗಿದ್ದಾರೆ. ಖುದ್ದು ನಟಿಯೇ ಸೋಮವಾರ ರಾತ್ರಿ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಸಾರಾ ಅಲಿ ಖಾನ್‌ ಅವರ ಡ್ರೈವರ್‌ಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ. ಸ್ವತಃ ಈ ವಿಚಾರವನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಬರೆದುಕೊಂಡಿದ್ದಾರೆ ಸಾರಾ. 'ನನ್ನ ಚಾಲಕರೊಬ್ಬರಿಗೆ ಕೊರೊನಾ ಪಾಸಿಟಿವ್ ಆಗಿದೆ. ಸದ್ಯ ಅವರನ್ನು ಕ್ವಾರಂಟೈನ್ ಕೇಂದ್ರಕ್ಕೆ ಕಳಿಸಲಾಗಿದೆ. 

ನನ್ನ ಕುಟುಂಬದ ಸದಸ್ಯರು ಮತ್ತು ಇತರೆ ಸಿಬ್ಬಂದಿಗಳಿಗೂ ಕೊರೊನಾ ಟೆಸ್ಟ್ ಮಾಡಿಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಆಗಿದೆ. ಅಗತ್ಯವಾದ ಮುನ್ನೆಚ್ಚರಿಕಾ ಕ್ರಮಗಳನ್ನು ನಾವು ತೆಗೆದುಕೊಳ್ಳಲಿದ್ದೇವೆ. ಸೂಕ್ತ ರೀತಿಯಲ್ಲಿ ನಮಗೆ ಸಹಾಯ ಮಾಡಿದ ಮತ್ತು ಸೂಚನೆಗಳನ್ನು ನೀಡಿದ ಬಿಎಂಸಿಗೆ ಧನ್ಯವಾದಗಳು' ಎಂದು ಸಾರಾ ಹೇಳಿದ್ದಾರೆ.

ಇತ್ತೀಚೆಗೆ ಸಾರಾ ಅಲಿಖಾನ್ ಮತ್ತು ಅವರ ಸಹೋದರ ಇಬ್ರಾಹಿಂ ಇಬ್ಬರು ತಂದೆ ಸೈಫ್ ಅಲಿ ಖಾನ್ ಮನೆಗೆ ಭೇಟಿ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!

We’re getting married! ನಾವು ಮದುವೆ ಆಗುತ್ತಿದ್ದೇವೆ: ಕೊನೆಗೂ ಭಾವಿ ಪತಿ ಜತೆ ಗುಡ್ ನ್ಯೂಸ್ ನೀಡಿದ ನಟಿ ಸ್ಪಂದನಾ