ಸುಶಾಂತ್ ಸಿಂಗ್-ರಿಯಾ ಚಕ್ರವರ್ತಿ 
ಬಾಲಿವುಡ್

ಕೊಲೆಗಾರ್ತಿ ಅಂದ್ರಿ, ಶೀಲ ಶಂಕಿಸಿದ್ರಿ, ಸಾಕಾಗಲಿಲ್ಲವೇ? ಸುಶಾಂತ್ ಸಿಂಗ್ ಪ್ರೇಯಸಿ ಗರಂ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ನೆಟಿಗರು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು ಅಶ್ಲೀಲ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ.

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ ಆತ್ಮಹತ್ಯೆಗೆ ಸಂಬಂಧಿಸಿದಂತೆ ಪ್ರೇಯಸಿ ರಿಯಾ ಚಕ್ರವರ್ತಿ ಅವರನ್ನು ನೆಟಿಗರು ಹೆಚ್ಚು ಟಾರ್ಗೆಟ್ ಮಾಡುತ್ತಿದ್ದು ಅಶ್ಲೀಲ ಕಮೆಂಟ್ ಗಳನ್ನು ಮಾಡುತ್ತಿದ್ದಾರೆ. 

ನೆಟಿಗರು ತಮ್ಮ ವಿರುದ್ಧ ಟೀಕೆಗಳನ್ನು ಮಾಡುತ್ತಿದ್ದರು ಮೌನವಾಗಿದ್ದ ರಿಯಾ ಚಕ್ರವರ್ತಿ ಇದೀಗ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ತಮಗೆ ಬರುತ್ತಿರುವ ಕೆಟ್ಟ ಕಾಮೆಂಟ್ ಮತ್ತು ಬೆದರಿಕೆಗಳ ಪೋಸ್ಟ್ ಅನ್ನು ಸ್ಕ್ರೀನ್ ಶಾಟ್ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿ ಪ್ರಶ್ನೆ ಮಾಡಿದ್ದಾರೆ. 

ದುಡ್ಡಿಗಾಗಿ ಸುಶಾಂತ್ ಸಿಂಗ್ ಸಹವಾಸ ಮಾಡಿದ್ದಾಳೆ. ಕೊಲೆಗಾತಿ ಅಂದರೂ ಶೀಲ ಶಂಕಿಸಿದರೂ ಸುಮ್ಮನಿದ್ದೆ ಆದರೆ ನನ್ನನ್ನು ಸುಮ್ಮನೆ ಇರಲು ಬಿಡುತ್ತಿಲ್ಲ. ಇದೀಗ ನನ್ನನ್ನು ಅತ್ಯಾಚಾರ ಮಾಡಿ ಕೊಲೆ ಮಾಡುವ ಬೆದರಿಕೆ ಹಾಕುತ್ತಿದ್ದೀರಾ. ಹೀಗೆ ಬೆದರಿಕೆ ಹಾಕಲು ನಿಮಗೆ ಅಧಿಕಾರ ಕೊಟ್ಟರು ಯಾರು ಎಂದು ಪ್ರಶ್ನಿಸಿದ್ದಾರೆ. 

ಬೆದರಿಸುವುದು ಕಾನೂನು ಪ್ರಕಾರ ಅಪರಾಧ. ಇಷ್ಟಕ್ಕೆ ಸುಮ್ಮನಾದರೆ ಸರಿ. ಇಲ್ಲದಿದ್ದರೆ ಕಾನೂನು ರೀತಿ ಮುಂದಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದೇ ವೇಳೆ ಸೈಬರ್ ಕ್ರೈಂ ಮ್ತು ಸೈಬರ್ ಕ್ರೈಂ ಹೆಲ್ಪ್ ಲೈನ್ ಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT