ಬಾಲಿವುಡ್

ಮುಂಬೈ ಪೊಲೀಸರು ಸಮರ್ಥರಿದ್ದಾರೆ, ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ: ಅನಿಲ್ ದೇಶಮುಖ್

Vishwanath S

ನಾಗಪುರ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರದ್ದು ಆತ್ಮಹತ್ಯೆಯೋ? ಅಥವಾ ಕೊಲೆಯೋ? ಎಂಬ ತೀವ್ರ ಚರ್ಚೆಗಳು ನಡೆಯುತ್ತಿವೆ. ಆದರೂ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ ಎಂದು ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಹೇಳಿದ್ದಾರೆ. 

ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣವನ್ನು ನಿಭಾಯಿಸಲು ಮುಂಬೈ ಪೊಲೀಸರು ಸಮರ್ಥರಾಗಿದ್ದಾರೆ. ಪೊಲೀಸರು ಈ ಪ್ರಕರಣವನ್ನು "ವ್ಯಾಪಾರ ಪೈಪೋಟಿ"ಯ ಕೋನವನ್ನು ಪರಿಶೀಲಿಸುತ್ತಿದ್ದಾರೆ ಎಂದು ಹೇಳಿದರು. 

34 ವರ್ಷದ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಜೂನ್ 14ರಂದು ಮುಂಬೈನ ಬಾಂದ್ರಾ ಅಪಾರ್ಟ್ಮೆಂಟ್ನಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆ ಪ್ರಕರಣ ಎಂದು ಪೊಲೀಸರು ಹೇಳಿಕೊಂಡಿದ್ದಾರೆ. ನಟ ಖಿನ್ನತೆಗೆ ಔಷಧಿ ಪಡೆದಿರುವುದ ಮುಂಬೈ ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ. 

ಸುಶಾಂತ್ ಸಿಂಗ್ ಪ್ರೇಯಸಿ, ನಟ ರಿಯಾ ಚಕ್ರವರ್ತಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಟ್ವೀಟ್ ಮಾಡಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ತನಗೆ ಸರ್ಕಾರದಲ್ಲಿ ಸಂಪೂರ್ಣ ನಂಬಿಕೆ ಇದ್ದರೂ, ಸಿಬಿಐ ವಿಚಾರಣೆಯು ಪ್ರಕರಣಕ್ಕೆ ನ್ಯಾಯ ಒದಗಿಸಲು ಸಹಾಯ ಮಾಡುತ್ತದೆ ಎಂದು ಚಕ್ರವರ್ತಿ ಹೇಳಿದರು.

ನಟನ ಸಾವಿನ ಬಗ್ಗೆ ಮುಂಬೈ ಪೊಲೀಸರು ವಿವರವಾದ ವಿಚಾರಣೆ ನಡೆಸುತ್ತಿದ್ದಾರೆ ಮತ್ತು ಸಂಬಂಧಪಟ್ಟ ಜನರಿಂದ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. 

SCROLL FOR NEXT