ರಿಯಾ ಚಕ್ರವರ್ತಿ 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಪ್ರಕರಣ: ತನಿಖೆ ವರ್ಗಾವಣೆ ಕೋರಿ ನಟಿ ರಿಯಾ ಚಕ್ರವರ್ತಿ 'ಸುಪ್ರೀಂ'ಗೆ ಮೊರೆ

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ ಪಾಟ್ನಾದಲ್ಲಿದಾಖಲಾದ ಎಫ್‌ಐಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬುಧವಾರ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ. 

ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಾವಿನ ಪ್ರಕರಣದಲ್ಲಿ ತನ್ನ ವಿರುದ್ಧ ಪಾಟ್ನಾದಲ್ಲಿ ದಾಖಲಾದ ಎಫ್‌ಐಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬಾಲಿವುಡ್ ನಟಿ ರಿಯಾ ಚಕ್ರವರ್ತಿ ಬುಧವಾರ ಸುಪ್ರೀಂ ಕೋರ್ಟ್ ಮೊರೆಹೋಗಿದ್ದಾರೆ.

ರಜಪೂತ್ ಆತ್ಮಹತ್ಯೆ ಮಾಡಿಕೊಳ್ಲಲು ಸಹಕರಿಸಿದ್ದಾರೆ ಎಂದು ಆರೋಪಿಸಿ ನಟನ ತಂದೆ ಕೆ.ಕೆ.ಸಿಂಗ್ ಅವರು ಚಕ್ರವರ್ತಿ ಮತ್ತು ಅವರ ಕುಟುಂಬ ಸದಸ್ಯರು ಸೇರಿದಂತೆ ಇತರ ಆರು ಜನರ ವಿರುದ್ಧ ಪಾಟ್ನಾದಲ್ಲಿ ಪೊಲೀಸ್ ದೂರು ದಾಖಲಿಸಿದ ಒಂದು ದಿನದ ನಂತರ ಈ ಬೆಳವಣಿಗೆ ನಡೆದಿದೆ.

ಪ್ರಕರಣವನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದೇನೆ ಎಂದು ರಿಯಾ ಚಕ್ರವರ್ತಿ ಪರ ವಕೀಲ ಸತೀಶ್ ಮನೇಶಿಂದೆ ಹೇಳಿದ್ದಾರೆ. ತನ್ನ ಅರ್ಜಿಯಲ್ಲಿ,ನಟಿ ಬಿಹಾರ ಪೊಲೀಸರು ರಜಪೂತ್ ಅವರ ತಂದೆ ಸಲ್ಲಿಸಿದ ಎಫ್ಐಆರ್ ಮೇಲಿನ ತನಿಖೆಯನ್ನು ತಡೆಹಿಡಿಯಲು ಕೋರಿದ್ದಾರೆ.

34 ವರ್ಷದ ನಟ  ಸುಶಾಂತ್ ಸಿಂಗ್ ರಜಪೂತ್ ಜೂನ್ 14 ರಂದು ಮುಂಬೈನ ಉಪನಗರ ಬಾಂದ್ರಾದಲ್ಲಿರುವ ತನ್ನ ಅಪಾರ್ಟ್ಮೆಂಟ್ ನ ಚಾವಣಿಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!