ಸುಶಾಂತ್ ಸಿಂಗ್ ರಜಪೂತ್ 
ಬಾಲಿವುಡ್

ಸುಶಾಂತ್ ಸಿಂಗ್ ರಜಪೂತ್ ಸಾವಿನ ನೋವಲ್ಲೇ ಇಹಲೋಕ ತ್ಯಜಿಸಿದ ಅತ್ತಿಗೆ!

ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಎಲ್ಲರನ್ನೂ ಆಘಾತಕ್ಕೀಡುಮಾಡಿತ್ತು. 

ಮುಂಬಯಿ: ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ಎಲ್ಲರನ್ನೂ ಆಘಾತಕ್ಕೀಡುಮಾಡಿತ್ತು.  ಈ ಆಘಾತದಿಂದ ಹೊರಬರಲಾಗದೆ ಬಿಹಾರದ ಪಾಟ್ನಾದಲ್ಲಿದ್ದ ಸುಶಾಂತ್ ಸಿಂಗ್ ಅಣ್ಣನ (ಕಸಿನ್) ಹೆಂಡತಿ ಸುಧಾ ದೇವಿ ನಿನ್ನೆ ಸಾವನ್ನಪ್ಪಿದ್ದಾರೆ.

ಸುಶಾಂತ್ ಸಾವಿನ ಸುದ್ದಿ ತಿಳಿದ ದಿನದಿಂದ ಅವರು ಅನ್ನ, ನೀರು ಸೇವಿಸಿರಲಿಲ್ಲ. ನಿನ್ನೆ ಮುಂಬೈನಲ್ಲಿ ಸುಶಾಂತ್ ಅಂತ್ಯಕ್ರಿಯೆ ನಡೆಯುವಾಗಲೇ ಸುಧಾ ದೇವಿ ಕೊನೆಯುಸಿರೆಳೆದಿದ್ದಾರೆ. ಕೇವಲ 34ನೇ ವಯಸ್ಸಿನಲ್ಲಿ ಪ್ರಾಣ ಕಳೆದುಕೊಂಡ ಸುಶಾಂತ್ ಸಿಂಗ್ ಈ ರೀತಿಯ ನಿರ್ಧಾರ ತೆಗೆದುಕೊಳ್ಳಬಹುದು ಎಂದು ಯಾರೂ ಊಹಿಸಿರಲಿಲ್ಲ. ಈ ಘಟನೆಯಿಂದಾಗಿ ಆತನ ಕುಟುಂಬಕ್ಕೆ ತೀರಾ ಆಘಾತವಾಗಿದ್ದು, ಈ ಆಘಾತವನ್ನು ಭರಿಸಲಾರದೆ ಸುಶಾಂತ್ ಸಿಂಗ್ ಅತ್ತಿಗೆ ಸಾವನ್ನಪ್ಪಿದ್ದಾರೆ.

ಕಿರುತೆರೆ ಮೂಲಕ ನಟನಾ ರಂಗಕ್ಕೆ ಬಂದ ಸುಶಾಂತ್ ಸಿಂಗ್ ರಜಪೂತ್ ಇದುವರೆಗೂ 11 ಬಾಲಿವುಡ್​ ಸಿನಿಮಾಗಳಲ್ಲಿ ನಟಿಸಿದ್ದಾರೆ. ಸುಶಾಂತ್ ಸಿಂಗ್ ಸಾವಿಗೆ ಬಾಲಿವುಡ್, ಸಿನಿಮಾ ತಾರೆಯರು, ರಾಜಕಾರಣಿಗಳು ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದರು. ಸುಶಾಂತ್ ಛಿಚ್ಚೋರೆ ಸಿನಿಮಾದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT