ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಬಾಲಿವುಡ್

ಕುಟುಂಬಸ್ಥರಿಂದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅಸ್ಥಿ ವಿಸರ್ಜನೆ

ಮೊನ್ನೆಯಷ್ಟೇ ನಿಧನರಾಗಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅಸ್ಥಿ ವಿಸರ್ಜನೆ ಕಾರ್ಯಕ್ರಮ ನೆರವೇರಿದ್ದು, ಕುಟುಂಬಸ್ಥರು ಭಾಗಿಯಾಗಿದ್ದರು.

ರಿಷಿ ಕಪೂರ್ ಅಸ್ಥಿ ವಿಸರ್ಜನೆ
Shilpa D
Updated On : 4 May 2020, 2:26 pm

ಮುಂಬಯಿ: ಮೊನ್ನೆಯಷ್ಟೇ ನಿಧನರಾಗಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ಅಸ್ಥಿ ವಿಸರ್ಜನೆ ಕಾರ್ಯಕ್ರಮ ನೆರವೇರಿದ್ದು, ಕುಟುಂಬಸ್ಥರು ಭಾಗಿಯಾಗಿದ್ದರು.
 
ಪತ್ನಿ ನೀತು ಕಪೂರ್, ಪುತ್ರಿ ರಿಧಿಮಾ ಕಪೂರ್, ಪುತ್ರ ರಣಬೀರ್ ಕಪೂರ್, ಗೆಳತಿ ಅಲಿಯಾ ಭಟ್ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಮುಂಬೈನ ಬಂಗಂಗಾದಲ್ಲಿ ಅಸ್ಥಿ ವಿಸರ್ಜನೆ ಕಾರ್ಯಕ್ರಮ ನೆರವೇರಿಸಲಾಗಿದೆ.
 
ಹರಿದ್ವಾರದಲ್ಲಿ ಅಸ್ಥಿ ವಿಸರ್ಜನೆ ಮಾಡಬೇಕೆಂದು ಕುಟುಂಬಸ್ಥರ ಆಸೆಯಾಗಿತ್ತು. ಆದರೆ ಲಾಕ್ ಡೌನ್ ನಿಂದಾಗಿ ಅಧಿಕಾರಿಗಳು ಅನುಮತಿ ನೀಡದ ಕಾರಣ ಮುಂಬೈನಲ್ಲೇ ಅಸ್ಥಿ ವಿಸರ್ಜಿಸಿರುವುದಾಗಿ ರಣಬೀರ್ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement