ಲಾಕ್ ಡೌನ್ ನಿಯಮ ಮುರಿದ ಹಿನ್ನಲೆ: ಪೂನಂ ಪಾಂಡೆ ವಿರುದ್ಧ ಪ್ರಕರಣ ದಾಖಲು
ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ಲಾಕ್ ಡೌನ್ ನಿಯಮ ಮುರಿದ ಹಿನ್ನಲೆಯಲ್ಲಿ ಬಾಲಿವುಡ್ ನಟಿ ಮತ್ತು ಮಾಡೆಲ್ ಪೂನಂ ಪಾಂಡೆ ವಿರುದ್ಧ ಮುಂಬೈನಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈನ ಮರೀನ್ ಡ್ರೈವ್ ನಲ್ಲಿ ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಲಾಕ್ ಡೌನ್ ನಿಯಮ ಮುರಿದು ಕಾರಿನಲ್ಲಿ ಸುತ್ತಾಡುತ್ತಿದ್ದ ಹಿನ್ನಲೆಯಲ್ಲಿ ಮುಂಬೈ ಪೊಲೀಸರು ಲಾಕ್ ಡೌನ್ ನಿಯಮದಡಿಯಲ್ಲಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
ಪೂನಂ ಪಾಂಡೆ ಮತ್ತು ಆಕೆಯ ಸ್ನೇಹಿತ ಸ್ಯಾಮ್ ಅಹ್ಮದ್ ವಿರುದ್ಧ ಸೆಕ್ಷಣನ್ 269 (ಜೀವಕ್ಕೆ ಅಪಾಯ ತರುವ ರೋಗದ ಸೋಂಕನ್ನು ಹರಡುವ ನಿರ್ಲಕ್ಷ್ಯದ ಕ್ರಿಯೆ) ಮತ್ತು 188 (ಅಸಹಕಾರ) ಭಾರತೀಯ ದಂಡ ಸಂಹಿತೆಯ (ಐಪಿಸಿ) ಮತ್ತು ರಾಷ್ಟ್ರೀಯ ವಿಪತ್ತು ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಮೃತ್ಯುಂಜಯ್ ಹಿರೇಮಠ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.