ಕಿರಣ್ ಕುಮಾರ್ 
ಬಾಲಿವುಡ್

ಮತ್ತೊಬ್ಬ ಬಾಲಿವುಡ್ ನಟನಿಗೆ ಕೊರೋನಾ: ಹೋಮ್ ಕ್ವಾರಂಟೈನ್ ನಲ್ಲಿ ಕಿರಣ್ ಕುಮಾರ್

ಲಾಕ್ ಡೌನ್ ನಡುವೆಯೂ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಹಿಂದಿ ಚಲನಚಿತ್ರ ಹಾಗೂ ಕಿರುತೆರೆಯ ಹಿರಿಯ ನಟ ಕಿರಣ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದ್ದು, ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 

ಮುಂಬಯಿ: ಲಾಕ್ ಡೌನ್ ನಡುವೆಯೂ ಮುಂಬೈನಲ್ಲಿ ಕೊರೊನಾ ವೈರಸ್ ಸೋಂಕು ಹರಡುತ್ತಿದೆ. ಹಿಂದಿ ಚಲನಚಿತ್ರ ಹಾಗೂ ಕಿರುತೆರೆಯ ಹಿರಿಯ ನಟ ಕಿರಣ್ ಕುಮಾರ್ ಅವರಿಗೆ ಕೊರೊನಾವೈರಸ್ ಪಾಸಿಟಿವ್ ಬಂದಿದ್ದು, ಸದ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ. 

74 ವರ್ಷ ವಯಸ್ಸಿನ ನಟ ಕಿರಣ್ ಅವರಿಗೆ ಸದ್ಯಕ್ಕೆ ಯಾವುದೇ ರೀತಿಯ ರೋಗ ಲಕ್ಷಣಗಳು  ಕಂಡು ಬಂದಿಲ್ಲ. ಆರೋಗ್ಯ ಪರಿಸ್ಥಿತಿಯಲ್ಲಿ ಏರುಪೇರಾಗಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

"ನನಗೆ ರೋಗಲಕ್ಷಣಗಳು ಕಂಡು ಬಂದಿಲ್ಲ. ಮೇ 14ರಂದು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ತೆರಳಿದಾಗ ಕೊವಿಡ್ 19 ಪರೀಕ್ಷೆ ಮಾಡಿದರು. ಇದರಲ್ಲಿ ಪಾಸಿಟಿವ್ ಎಂದು ಫಲಿತಾಂಶ ಬಂದಿತ್ತು. ಹೀಗಾಗಿ, ಹೋಂ ಕ್ವಾರಂಟೈನ್ ನಲ್ಲಿದ್ದೇನೆ ಎಂದು ಕಿರಣ್ ಹೇಳಿದ್ದಾರೆ.

''ಜ್ವರ, ಕೆಮ್ಮು, ತಲೆನೋವು ಸೇರಿದಂತೆ ಯಾವುದೇ ಲಕ್ಷಣಗಳು ಕಾಣಿಸಿಕಂಡಿಲ್ಲ, ವೈದ್ಯರ ಸಲಹೆಯಂತೆ ಮನೆಯಲ್ಲೇ ಕ್ವಾರಂಟೈನ್ ನಲ್ಲಿದ್ದೇನೆ'' ಎಂದು ಪಿಟಿಐಗೆ ಕಿರಣ್ ತಿಳಿಸಿದ್ದಾರೆ. ಧಡ್ಕನ್, ಮುಜ್ಸೆ ದೋಸ್ತಿ ಕರೊಗೆ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಕಿರಣ್ ಅವರ ಕ್ವಾರಂಟೈನ್ ಬದುಕಿಗೆ ಮನೆಯವರು ಸಹಕರಿಸುತ್ತಿದ್ದಾರೆ. 

ನಮ್ಮ ಮನೆಯ ಮೂರನೇ ಮಹಡಿಯಲ್ಲಿ ನಾನು ವಾಸವಿದ್ದೇನೆ. ಮನೆಯವರು ಎರಡನೇ ಮಹಡಿಯಲ್ಲಿದ್ದಾರೆ. ಮೇ 26 ಅಥವಾ 27ಕ್ಕೆ ಇನ್ನೊಂದು ಸುತ್ತಿನ ಪರೀಕ್ಷೆ ನಡೆಸಲಾಗುತ್ತದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್