ಕರಣ್ ಜೋಹರ್ 
ಬಾಲಿವುಡ್

ಮುಂಬೈ: ಕರಣ್ ಜೋಹರ್ ಮನೆಯ ಇಬ್ಬರು ಕೆಲಸಗಾರರಿಗೆ ಕೋವಿಡ್- 19 ಪಾಸಿಟಿವ್ 

ಬಾಲಿವುಡ್  ಚಿತ್ರ ನಿರ್ಮಾಪಕ ಕರಣ್ ಜೋಹರ್ ಮನೆಯಲ್ಲಿನ ಇಬ್ಬರು  ಕೆಲಸಗಾರರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಕರಣ್ ಜೋಹರ್ ಸೋಮವಾರ ಈ ವಿಷಯ ತಿಳಿಸಿದ್ದು, ಸೋಂಕಿತ ಮನೆಕೆಲಸದವರು  ಇದೀಗ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಮುಂಬೈ: ಬಾಲಿವುಡ್  ಚಿತ್ರ ನಿರ್ಮಾಪಕ ಕರಣ್ ಜೋಹರ್ ಮನೆಯಲ್ಲಿನ ಇಬ್ಬರು  ಕೆಲಸಗಾರರಿಗೆ ಕೋವಿಡ್ -19 ಪಾಸಿಟಿವ್ ದೃಢಪಟ್ಟಿದೆ. ಕರಣ್ ಜೋಹರ್ ಸೋಮವಾರ ಈ ವಿಷಯ ತಿಳಿಸಿದ್ದು, ಸೋಂಕಿತ ಮನೆಕೆಲಸದವರು  ಇದೀಗ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ತಿಳಿಸಿದಾಗ ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟಡಕ್ಕೆ ಕ್ರಿಮಿನಾಶಕ ಸಿಂಪಡಿಸಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಈ ಕುರಿತು ಟ್ವೀಟರ್ ನಲ್ಲಿ ಬರೆದುಕೊಂಡಿರುವ ಕರಣ್ ಜೋಹರ್,  ನಮ್ಮ ಮನೆಗೆಲಸದ ಇಬ್ಬರಿಗೆ ಕೋವಿಡ್-19 ದೃಢಪಟ್ಟಿದೆ ಎಂಬುದನ್ನು ನಿಮಗೆ ತಿಳಿಸಲು ಬಯಸುತ್ತೇನೆ. ರೋಗದ ಲಕ್ಷಣಗಳು ಕಂಡುಬಂದ ಕೂಡಲೇ ಅವರನ್ನು ನಮ್ಮ ಮನೆಯ ಒಂದು ಭಾಗದಲ್ಲಿ  ಪ್ರತ್ಯೇಕವಾಗಿರಿಸಿ, ಬೃಹನ್ ಮುಂಬೈ ಮಹಾನಗರ ಪಾಲಿಕೆಗೆ ಮಾಹಿತಿ ನೀಡಿದೆವು. ಮುನ್ನೆಚ್ಚರಿಕೆ ನಿಯಮಾನುಸರ ಕಟ್ಟಡಕ್ಕೆ ಕ್ರಿಮಿನಾಶಕ ಸಿಂಪಡಿಸಲಾಗಿದೆ ಎಂದು  ತಿಳಿಸಿದ್ದಾರೆ.

ಕುಟುಂಬ ಸದಸ್ಯರು ಮತ್ತು ಇತರ ಯಾವುದೇ ಕೆಲಸಗಾರರಿಗೆ ಸೋಂಕಿನ ಲಕ್ಷಣಗಳು ಕಂಡುಬಂದಿಲ್ಲ, ಆದರೆ, ಅವರ ಸ್ವಾಬ್ ಪರೀಕ್ಷೆ ನಡೆಸಲಾಗಿದ್ದು, ನೆಗೆಟಿವ್ ವರದಿ ಬಂದಿದೆ. ಆದರೂ, ನಮ್ಮ ಸುತ್ತಲಿನವರ ಸುರಕ್ಷತೆಗಾಗಿ ಮುಂದಿನ 14 ದಿನಗಳವರೆಗೆ ಪ್ರತ್ಯೇಕವಾಸದಲ್ಲಿರಲಿದ್ದೇವೆ. ಈ ನಿರ್ಧಾರಕ್ಕೆ ಬದ್ಧವಾಗಿದ್ದೇವೆ ಮತ್ತು ಅಧಿಕಾರಿಗಳು ಸೂಚಿಸುವ ಎಲ್ಲ ಕ್ರಮಗಳನ್ನು ಸೂಕ್ತ ರೀತಿಯಲ್ಲಿ ಪಾಲಿಸುವುದಾಗಿ ಅವರು ಭರವಸೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ